ತೆಂಕನಿಡಿಯೂರು : ಗುರುನಡೆ ಗ್ರಾಮದೆಡೆ ಕಾರ್ಯಕ್ರಮ ಉದ್ಘಾಟನೆ

ಮಲ್ಪೆ : 19ನೇ ಯ ಶತಮಾನದ ದಾರ್ಶನಿಕ, ಮಾನವತಾವಾದಿ, ಇಂದು ಬ್ರಹ್ಮಶ್ರೀ ನಾರಾಯಣಗುರುಗಳು ನೀಡಿದ ಸಂದೇಶ ಒಂದು ಕಾಲ, ಜಾತಿ,ಮತ, ಧರ್ಮಕ್ಕೆ ಸೀಮಿತವಾಗದೆ, ಸಾರ್ವಕಾಲಿಕ ಸತ್ಯದೊಂದಿಗೆ ಸರ್ವಧರ್ಮಗಳ ತತ್ವವನ್ನು ಜಗತ್ತಿಗೆ ಸಾರಿದೆ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿಯ ಪ್ರಾಂಶುಪಾಲ ಡಾ. ಗಣನಾಥ ಶೆಟ್ಟಿ ಎಕ್ಕಾರು ಹೇಳಿದರು.

ಮಂಗಳೂರು ವಿಶ್ವವಿದ್ಯಾನಿಲಯ ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ ಪೀಠ, ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ತೆಂಕನಿಡಿಯೂರು ಇವರ ಸಹಯೋಗದಲ್ಲಿ ನಡೆದ ಗುರುನಡೆ ಗ್ರಾಮದೆಡೆ ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದರು.

ನಾರಾಯಣಗುರುಗಳು ಕಂಡ ದೇವರು ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ನೀಡಿದ ರಾಜ್ಯಶಾಸ್ತ್ರ ಉಪನ್ಯಾಸಕ ಮತ್ತು ಸಂಘಟಜ ದಯಾನಂದ ಕರ್ಕೇರ ಉಗ್ಗೆಲ್‌ಬೆಟ್ಟು ಒಂದೇ ಜಾತಿ ಒಂದೇ ಮತ ಒಂದೇ ದೇವರು ಎಂಬ ತತ್ವವನ್ನು ನಾರಾಯಣಗುರುಗಳುಬೋಧಿಸಿದ್ದು ಮಾತ್ರವಲ್ಲ ಅದನ್ನು ಸಾಮಾಜಿಕವಾಗಿ ಸಾಕಾರಗೊಳಿಸಿದರು. 

ಸಮಾನ ಸಮಾಜ ವ್ಯವಸ್ಥೆಯನ್ನು ರೂಪಿಸುವಲ್ಲಿ ಅವರು ಸ್ವಾತಂತ್ರ್ಯ ಪೂರ್ವದಲ್ಲಿ ಹಾಕಿದ ಅಡಿಪಾಯ ಮುಂದೆ ಹಲವಾರು ಸಾಮಾಜಿಕ ಸುಧಾರಣೆಗಳಿಗೆ ಕಾರಣವಾಯಿತು ಎಂದರು.

ಮಂಗಳೂರು ವಿಶ್ವವಿದ್ಯಾನಿಲಯ ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ ಪೀಠದ ನಿರ್ದೇಶಕ ಡಾ. ಗಣೇಶ್ ಅಮೀನ್ ಸಂಕಮಾರ್ ಪೀಠ ಹಾಗೂ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿ ಸ್ವಾಗತಿಸಿದರು. 

ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಿಶ್ವನಾಥ ಕರಬ ಹಾಗೂ ಗೋವಿಂದದಾಸ ಕಾಲೇಜಿನ ಉಪನ್ಯಾಸಕಿ ಜಯಂತಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. 

ಬಳಿಕ ನಾರಾಯಣಗುರುಗಳ ಸಂದೇಶದ ಕುರಿತಾಗಿ ರಸಪ್ರಶ್ನೆ ಕಾರ್ಯಕ್ರಮ ನಡೆಯಿತು. ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಹೆಚ್ ಕೆ. ವೆಂಕಟೇಶ್ ಕಾರ್ಯಕ್ರಮ ನಿರೂಪಿಸಿದರೆಸಂಖ್ಯಾಶಾಸ್ತ್ರ ವಿಭಾಗದ ಮುಖ್ಯಸ್ಥ ಉಮೇಶ್ ಪೈ ವಂದಿಸಿದರು.

 
 
 
 
 
 
 
 
 

Leave a Reply