ಕೇಂದ್ರ ಶಿಕ್ಷಣ ನೀತಿಯಿಂದ ಪ್ರಾದೇಶಿಕ ಭಾಷೆಗೆ ಬಲ : ಸುರೇಶ್ ಕುಮಾರ್.

ಮೂಲ್ಕಿ :  ಕೇಂದ್ರದಿಂದ ಜಾರಿಯಾಗಲಿರುವ ಹೊಸ ಶಿಕ್ಷಣ ನೀತಿಯಿಂದ ಪ್ರಾದೇಶಿಕ ಭಾಷೆಗಳಿಗೆ ವಿಶೇಷ ಆದ್ಯತೆ ಸಿಗಲಿದೆ. ಇದರಿಂದ ತುಳು ಭಾಷೆಯನ್ನು ಕಲಿಸುತ್ತಿರುವ ಅತಿಥಿ ಶಿಕ್ಷಕರಿಗೂ ಸಹ ನ್ಯಾಯ ಸಿಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ರವರು ತಿಳಿಸಿದ್ದಾರೆ.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ದಯಾನಂದ ಜಿ. ಕತ್ತಲ್ಸಾರ್ ಅವರು ಬೆಂಗಳೂರಿನಲ್ಲಿ ಶಿಕ್ಷಣ ಸಚಿವರನ್ನು ಭೇಟಿ ಮಾಡಿ ಅತಿಥಿ ಶಿಕ್ಷಕರ ಸಮಸ್ಯೆ ಬಗ್ಗೆ ಮಾಹಿತಿ ನೀಡಿದಾಗ ಸಚಿವರು ಪ್ರತಿಕ್ರಿಯಿ ಸಿದರು. ಮುಂದಿನ 15 ದಿನಗಳ ಒಳಗೆ ಈ ಶಿಕ್ಷಣ ನೀತಿಯ ಸ್ಪಷ್ಟ ಚಿತ್ರಣ ಸಿಗಲಿದೆ ಆನಂತರ ಅದಕ್ಕೆ ಪೂರಕವಾಗಿ ಅತಿಥಿ ಶಿಕ್ಷಕರ ಸಮಸ್ಯೆಯನ್ನ ಬಗೆಹರಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಅಕಾಡೆಮಿಯ ಅಧ್ಯಕ್ಷರು ತುಳು ಭಾಷೆ ಅಧಿಕೃತವಾಗಿ ರಾಜ್ಯ ಭಾಷೆಯಾಗಬೇಕು ಎಂಬ ಧ್ವನಿಗೆ ತನ್ನ ಸಹಮತವನ್ನು ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಅಕಾಡೆಮಿಯ ಸದಸ್ಯೆ ಕಾಂತಿ ಶೆಟ್ಟಿ ಉಪಸ್ಥಿತರಿದ್ದರು

 
 
 
 
 
 
 
 
 
 
 

Leave a Reply