ಯು.ಪಿ.ಎಂ.ಸಿ- ಎನ್.ಎಸ್.ಎಸ್. ವಾರ್ಷಿಕ ಶಿಬಿರ ಉದ್ಘಾಟನೆ.

ಎನ್.ಎಸ್.ಎಸ್ ನಿಂದ ಮಾನವೀಯ ಸಂಬಂಧ ಸುದೃಢ

ಪರಸ್ಪರ ಸೌಹಾರ್ದ, ಸ್ನೇಹ, ಸಹಕಾರ, ಆತ್ಮೀಯತೆ, ಕೃತಜ್ಞತೆ ಮೊದಲಾದ ಮಾನವೀಯ ಸಂಬಂಧಗಳು ಎನ್.ಎಸ್.ಎಸ್ ನಿಂದ ಸುದೃಢಗೊಳ್ಳುತ್ತಿದ್ದು ಇದರಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದರಿಂದ ಬದುಕಿನ ಮೌಲ್ಯಗಳನ್ನು ಬೆಳಸಿಕೊಳ್ಳಲು ಸಾಧ್ಯವಾಗುವುದಾಗಿ ಎಸ್.ವಿ.ಎಸ್ ವಿದ್ಯಾವರ್ಧಕ ಸಂಘದ ಕಾರ್ಯ ದರ್ಶಿಗಳಾದ ಶ್ರೀ ಸತ್ಯೇಂದ್ರ ಪೈಯವರು ಹೇಳಿದರು.

ಅವರು ಡಿಸೆಂಬರ್ 21 ರಂದು ಕಟಪಾಡಿ ಏಣಗುಡ್ಡೆ ಎಸ್.ವಿ.ಎಸ್ ಪ್ರೌಢಶಾಲೆಯಲ್ಲಿ ಆರಂಭಗೊಂಡ ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ವಿದ್ಯಾವರ್ಧಕ ಸಂಘದ ಸದಸ್ಯರಾದ ಶ್ರೀ ನಿತ್ಯಾನಂದ ಶೆಣೈ, ಕಟಪಾಡಿ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಶ್ರೀಮತಿ ಇಂದಿರಾ ಎಸ್. ಆಚಾರ್ಯ, ಎಸ್.ವಿ.ಎಸ್ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಡಾ.ದಯಾನಂದ ಪೈ, ಎಸ್.ವಿ.ಎಸ್ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಸುಬ್ರಹ್ಮಣ್ಯ ತಂತ್ರಿ ಶಿಬಿರಕ್ಕೆ ಶುಭಕೋರಿದರು.

ಯು.ಪಿ.ಎಂ.ಸಿಯ ಪ್ರಾಚಾರ್ಯರಾದ ಡಾ.ಮಧುಸೂದನ್ ಭಟ್ ಅಧ್ಯಕ್ಷತೆ ವಹಿಸಿದ್ದರು. ಎನ್.ಎಸ್. ಎಸ್ ಯೋಜನಾಧಿಕಾರಿ ರಾಜೇಶ್ ಕುಮಾರ್ ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು, ಸಹಯೋಜ ನಾಧಿಕಾರಿ ಶ್ರೀ ಚಂದ್ರಶೇಖರ್ ಧನ್ಯವಾದವಿತ್ತರು, ಕನ್ನಡ ಉಪನ್ಯಾಸಕ ಶ್ರೀ ಶಶಿಕಾಂತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

 
 
 
 
 
 
 
 
 
 
 

Leave a Reply