ಯು.ಪಿ.ಎಂ‌.ಸಿ: ಹೂಡಿಕೆಯ ಬಗ್ಗೆ ಒಂದು ದಿನದ ಕಾರ್ಯಾಗಾರ

ಮಂಗಳೂರು ವಿಶ್ವವಿದ್ಯಾನಿಲಯ ಕಾಮರ್ಸ್ ಟೀಚರ್ಸ್ ‌ಅಸೋಸಿಯೇಶನ್ ಮತ್ತು ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ಸಹಭಾಗಿತ್ವದಲ್ಲಿ ವೃತ್ತಿ ಮಾರ್ಗದರ್ಶನ ಘಟಕದ ವತಿಯಿಂದ ತೃತೀಯ ಬಿ.ಕಾಂ ಮತ್ತು ಬಿಬಿಎ ವಿದ್ಯಾರ್ಥಿಗಳಿಗೆ ಹೂಡಿಕೆಯ ಬಗ್ಗೆ ಒಂದು ದಿನದ ಕಾರ್ಯಾಗಾರವನ್ನು ದಿನಾಂಕ 17ನೇ ಜನವರಿಯಂದು ಕಾಲೇಜಿನ ಉಪೇಂದ್ರ ಮಂಟಪದಲ್ಲಿ ಹಮ್ಮಿಕೊಳ್ಳಲಾಯಿತು. ಸೆಬಿಯ ಸರ್ಟಿಫೈಡ್ ಫಿನಾಸ್ಶಿಯಲ್ ಪ್ಲಾನರ್ ಆಗಿರುವ ಶ್ರೀ ನವೀನ್ ರೆಗೋ ಕಾರ್ಯಕ್ರಮ ಉದ್ಘಾಟಿಸಿ ಹೂಡಿಕೆಯ ವಿವಿಧ ಮಜಲುಗಳ ಬಗೆಗೆ ಸರಿಯಾದ ಮಾಹಿತಿಯನ್ನು ಪಡೆದು ಯೋಗ್ಯ ಕ್ಷೇತ್ರದಲ್ಲಿ ಹೂಡಿಕೆ ಮಾಡುವುದರಿಂದ ಭವಿಷ್ಯದಲ್ಲಿ ಆರ್ಥಿಕ ಸುಭದ್ರತೆಯನ್ನು ಹೊಂದಬಹುದು ಎಂದು ಹೇಳಿದರು.

ಕಾಲೇಜಿನ ಉಪಪ್ರಾಚಾರ್ಯೆ ಶ್ರೀಮತಿ ಆಶಾ ಹೆಗ್ಡೆ ಅಧ್ಯಕ್ಷರಾಗಿದ್ದರು. ಈ ಸಂದರ್ಭದಲ್ಲಿ ಲಿಯೋ ಅಮಲ್ ಮತ್ತು ಸಪ್ನಾ ಶೆಣೈ ಉಪಸ್ಥಿತರಿದ್ದರು. ತೃತೀಯ ಬಿಬಿಎ ನ ಫೇಸ್ಹ್ ಮೊಹಮ್ಮದ್ ಸ್ವಾಗತಿಸಿದರು, ಅಕ್ಷಯ್ ಭಟ್ ವಂದಿಸಿದರು, ವಾಣಿಜ್ಯ ಉಪನ್ಯಾಸಕ ಶ್ರೀ ಹರಿಕೇಶವ್ ಕಾರ್ಯಕ್ರಮ ನಿರೂಪಿಸಿ ಸಂಯೋಜಿಸಿದರು.

 
 
 
 
 
 
 
 
 
 
 

Leave a Reply