ಪ್ರಸ್ತುತ ಕಾಲಘಟ್ಟದಲ್ಲಿ ಕೂಡು ಕುಟುಂಬದ ಸಂಸ್ಕೃತಿಯನ್ನು ಬೆಳೆಸಿಕೊಳ್ಳಬೇಕಾದರೆ ಎನ್.ಎಸ್ .ಎಸ್ ನಲ್ಲಿ ಪಾಲ್ಗೊಳ್ಳು ವುದು ಅನಿವಾರ್ಯ~ರಂಗ ನಿರ್ದೇಶಕ ರವಿರಾಜ್ ಹೆಚ್.ಪಿ

ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ 2020-21 ವರ್ಷದ ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವು ಮಾರ್ಚ್ 5 ರಂದು ಕಾಲೇಜ್ ಸಭಾಭವನದಲ್ಲಿ ನಡೆಯಿತು.
ಕಾಲೇಜಿನ ಹಳೆವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷರಾದ ಶ್ರೀ ರವಿರಾಜ್ ಹೆಚ್.ಪಿ ಹಾಗೂ ಸಂಸ್ಕೃತಿ ವಿಶ್ವ ಪ್ರತಿಷ್ಠಾನ(ರಿ) ಉಡುಪಿ, ಇದರ ಯುವಬಳಗದ ಅಧ್ಯಕ್ಷ,  ಹಳೆವಿದ್ಯಾರ್ಥಿ ಶ್ರೀ ಮಹೇಶ್ ಮಲ್ಪೆ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಪ್ರಸ್ತುತ ಕಾಲಘಟ್ಟದಲ್ಲಿ ಕೂಡುಕುಟುಂಬದ ಸಂಸ್ಕೃತಿಯನ್ನು ಬೆಳೆಸಿಕೊಳ್ಳಬೇಕಾದರೆ ಎನ್.ಎಸ್ .ಎಸ್ ನಲ್ಲಿ ಪಾಲ್ಗೊಳ್ಳು ವುದು ಅನಿವಾರ್ಯವಾಗಿದ್ದು ಸೇವಾಮನೋಭಾವವನ್ನು ಬೆಳೆಸಿಕೊಳ್ಳು ವುದರಿಂದ ಸಮಾಜದಲ್ಲಿ ಮನ್ನಣೆಯನ್ನುಗಳಿಸ ಬಹುದು ಎಂಬುದಾಗಿ  ರವಿರಾಜ್ ಹೆಚ್.ಪಿ ಹೇಳಿದರು.

ವಿದ್ಯಾರ್ಥಿಯಾಗಿದ್ದಾಗ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿ ಕಾಲೇಜು ಕಲ್ಪಿಸಿದ ಅವಕಾಶಗಳನ್ನು ಸಮರ್ಥವಾಗಿ ಬಳಸಿ ಕೊಂಡು ತಾನು ಸಮಾಜದಲ್ಲಿ ಬೆಳೆದು ಬಂದ ರೀತಿಯನ್ನು ಶ್ರೀ ಮಹೇಶ್ ವಿವರಿಸಿ, ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರು.

ಕಾಲೇಜಿನ ಪ್ರಾಚಾರ್ಯರಾದ ಡಾ.ಮಧುಸೂದನ್ ಭಟ್ ಅಧ್ಯಕ್ಷರಾಗಿದ್ದರು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿ ಕಾರಿ ಶ್ರೀ ರಾಜೇಶ್ ಕುಮಾರ್ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಸಹಯೋಜನಾಧಿಕಾರಿ ಶ್ರೀ ಚಂದ್ರ ಶೇಖರ್ ವಂದಿಸಿದರು. ಕಾಲೇಜಿನ ವಾಣಿಜ್ಯ ಉಪನ್ಯಾಸಕ ಶ್ರೀ ರಾಘವೇಂದ್ರ ಜಿ.ಜಿ ಕಾರ್ಯಕ್ರಮವನ್ನು ನಿರ್ವಹಿಸಿದರು.

 
 
 
 
 
 
 
 
 
 
 

Leave a Reply