ಯುಪಿಎಂಸಿ: ನೂತನ ಡಿಜಿಟಲ್ ಗ್ರಂಥಾಲಯಕ್ಕೆ ಚಾಲನೆ

ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಆಧುನಿಕ ತಂತ್ರಜ್ಞಾನಕ್ಕೆ ಹೊಂದಿಕೊಂಡಿರುವ ಡಿಜಿಟಲ್ ಗ್ರಂಥಾಲಯವನ್ನು ಮೇ 21 ರಂದು ಕಾಲೇಜಿನ ಪ್ರಾಚಾರ್ಯರಾದ ಶ್ರೀಮತಿ ಆಶಾ ಕುಮಾರಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಅವರು ಇ-ಲೈಬ್ರರಿಯು ಇಂದಿನ ಸ್ಪರ್ಧಾತ್ಮಕ ಕಾಲಘಟ್ಟಕ್ಕೆ ಅತ್ಯಮೂಲ್ಯವಾಗಿದ್ದು ಇದು 3000ಕ್ಕೂ ಹೆಚ್ಚಿನ ಕಲಿಕಾ ಪುಸ್ತಕಗಳು, 100 ಕ್ಕೂ ಅಧಿಕ ಮ್ಯಾಗಜೀನ್ ಗಳು ಹಾಗೆಯೇ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗಲು ಅನುಕೂಲವಾಗುವ ಪುಸ್ತಕಗಳನ್ನು ಒಳಗೊಂಡಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಎಡ್ವೈಸ್ ನ ಸಂಸ್ಥಾಪಕ ಧೀರಜ್ ಮಂಗಳೂರು, ವಾಣಿಜ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ಪ್ರಭಾ ಕಾಮತ್, ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾಲೇಜಿನ ಗ್ರಂಥಪಾಲಕಿ ಶ್ರೀಮತಿ ಪಲ್ಲವಿ ನಿರೂಪಿಸಿದರು.

 
 
 
 
 
 
 
 
 

Leave a Reply