ವಿಶ್ವವಿದ್ಯಾನಿಲಯ ಮಟ್ಟದ ಕಬ್ಬಡಿ ಪಂದ್ಯಾವಳಿ ಉದ್ಘಾಟನೆ

ಉಡುಪಿ : ಕಲಿಯುವಿಕೆಯೊಂದಿಗೆ ದೈಹಿಕ ಕ್ಷಮತೆಯು ವಿದ್ಯಾರ್ಥಿಗಳಿಗೆ ಅತಿ ಮುಖ್ಯವಾಗಿದೆ. ಈ ದೃಷ್ಟಿಯಿಂದಲೇ ಹೊಸ ಶಿಕ್ಷಣ ನೀತಿಯು ಕ್ರೀಡೆಯನ್ನು ಅಧ್ಯಯನದ ಒಂದು ಭಾಗವಾಗಿ ಪರಿಗಣಿಸಿದೆ’ ಎಂದು ಉಡುಪಿ ದಕ್ಷಿಣ ಕನ್ನಡ ಮೀನುಗಾರಿಕಾ ಫೆಡರೇಶನಿನ ಅಧ್ಯಕ್ಷ ಯಶಪಾಲ್ ಸುವರ್ಣ ಅಭಿಪ್ರಾಯಪಟ್ಟರು.

ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಉಡುಪಿ ವಲಯದ ಪದವಿ ಕಾಲೇಜುಗಳ ಕಬಡಿ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಸಭೆಯ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಗಣನಾಥ ಎಕ್ಕಾರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಾತನಾಡಿದ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ ಶೈಕ್ಷಣಿಕ ಜೀವನದಲ್ಲಿ ಕ್ರೀಡೆಯ ಮಹತ್ವವನ್ನು ವಿವರಿಸಿದರು.

ಮಂಗಳೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಅಧ್ಯಕ್ಷ ಪ್ರೊ. ಒಲಿವರ್ ಜೇಮ್ಸ್, ಮಂಗಳೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗದ ಉಪನಿರ್ದೇಶಕ ಡಾ. ಹರಿದಾಸ ಕೂಳೂರು, ಐ.ಕ್ಯೂ.ಎ.ಸಿ. ಸಂಚಾಲಕ ಡಾ. ಸುರೇಶ್ ರೈ ಕೆ. ಉಪಸ್ಥಿತರಿದ್ದರು.
ದೈಹಿಕ ಶಿಕ್ಷಣ ನಿರ್ದೇಶಕ ಡಾ. ರಾಮಚಂದ್ರ ಪಾಟ್ಕರ್ ಸ್ವಾಗತಿಸಿದರು.ದಯಾನಂದ ಕರ್ಕೇರಾ ಕಾರ್ಯಕ್ರಮ ನಿರೂಪಿಸಿದರೆ, ಉಮೇಶ್ ಪೈ ವಂದಿಸಿದರು.

 
 
 
 
 
 
 
 
 
 
 

Leave a Reply