ಚುನಾವಣಾ ಕಾರ್ಯಗಳನ್ನು ಜನಸ್ನೇಹಿಯಾಗಿ ನಡೆಸಿ: ತುಕಾರಾಂ ಮುಂಡೆ

ಸಾರ್ವತ್ರಿಕ ಚುನಾವಣೆ 2023 ಗೆ ಸಂಬಂಧಿಸಿದಂತೆ ಎಲ್ಲಾ ಚುನಾವಣಾ ಕಾರ್ಯಗಳನ್ನು ಜನಸ್ನೇಹಿಯಾಗಿ ಮಾಡುವುದರ ಮೂಲಕ ಹೆಚ್ಚಿನ ಸಂಖ್ಯೆ ಯಲ್ಲಿ ಮತದಾರರು ಮತದಾನ ಮಾಡು ವಂತೆ ಪ್ರೇರೇಪಿಸುವಂತೆ ಉಡುಪಿ ಮತ್ತು ಕಾಪು ವಿಧಾನಸಭಾ ಕ್ಷೇತ್ರದ ಚುನಾವಣಾ ವೀಕ್ಷಕರಾದ ತುಕಾರಾಂ ಹರಿಭಾವು ಮುಂಡೆ ಹೇಳಿದರು.

ಅವರು ಇಂದು ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಉಡುಪಿ ಮತ್ತು ಕಾಪು ವಿಧಾನಸಭಾ ಕ್ಷೇತ್ರಗಳ ಚುನಾವಣಾ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು .

ಚುನಾವಣೆ ಕಾರ್ಯಗಳ ಕುರಿತು ಸಾರ್ವಜನಿಕರಿಂದ ಯಾವುದೇ ದೂರುಗಳು ಬಂದಲ್ಲಿ ಅವುಗಳನ್ನು ನಿಷ್ಪಕ್ಷವಾಗಿ ತನಿಖೆ ಮಾಡುವಂತೆ ತಿಳಿಸಿದ ಅವರು, ಸಾರ್ವಜನಿಕರೊಂದಿದೆ ನಿರಂತರ ಸಂಪರ್ಕ ಹೊಂದುವುದರ ಮೂಲಕ ಜನಸ್ನೇಹಿ ಚುನಾವಣಾ ನಡೆಸಿ, ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಕಾರ್ಯ ನಿರ್ವಹಿಸಿ ಎಂದರು.

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬ್ಯಾಂಕು ಗಳಲ್ಲಿ ನಡೆಯುವ ನಗದು ವಹಿವಾಟು ಸೇರಿದಂತೆ ಎಲ್ಲಾ ರೀತಿಯ ಬ್ಯಾಂಕಿಂಗ್ ವ್ಯವಹಾರಗಳ ಬಗ್ಗೆ ನಿಗಾ ಇಡುವಂತೆ ಸೂಚನೆ ನೀಡಿದರು.

ಇತ್ತಿಚಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮ ಗಳಲ್ಲಿ ಹೆಚ್ಚಿನ ಪ್ರಮಾಣದ ಪ್ರಚಾರ ಹಾಗೂ ದೂರುಗಳು ಕಂಡುಬರುತ್ತಿದ್ದು ಇವುಗಳನ್ನು ಸೂಕ್ತ ರೀತಿಯಲ್ಲಿ ವಿಲೇ ಮಾಡುವಂತೆ ತಿಳಿಸಿದರು.

ಚುನಾವಣಾ ಕರ್ತವ್ಯ ನಿರ್ವಹಣೆ ಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆ ಯಿಂದ ಕಾರ್ಯನಿರ್ವಹಿಸುವಂತೆ ಸೂಚನೆ ನೀಡಿದ ಅವರು , ಯಾವುದೇ ಒತ್ತಡ ಗೊಂದಲಗಳಿಗೆ ಒಳಗಾಗದಂತೆ ಸುಗಮ ವಾಗಿ ಚುನಾವಣಾ ಕರ್ತವ್ಯಗಳನ್ನು ನಿರ್ವಹಿಸುವಂತೆ ತಿಳಿಸಿದರು.

ಚುನಾವಣಾ ಆಯೋಗ ದ ಸೂಚನೆಯಂತೆ, ಯಾವುದೇ ಸಂದರ್ಭದಲ್ಲೂ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಎಚ್ಚರಿಕೆ ವಹಿಸುವುದರ ಮೂಲಕ ಮುಕ್ತ ಪಾರದರ್ಶಕ ಮತ್ತು ನ್ಯಾಯ ಸಮ್ಮತ ಚುನಾವಣೆಗೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಂಡು, ಚುನಾವಣಾ ಆಯೋಗ ನೀಡಿರುವ ನಿರ್ದೇಶನಗಳನ್ನು ಚಾಚು ತಪ್ಪದೆ ಪಾಲಿಸುವಂತೆ ತಿಳಿಸಿದರು.

ಸಭೆಯಲ್ಲಿ ಪೊಲೀಸ್ ವೀಕ್ಷಕಿ ಬಿನಿತಾ ಠಾಕೂರ್ , ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. , ಉಡುಪಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಸೀತಾ, ಕಾಪು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಬಿನೋಯ್ ಹಾಗೂ ಎರಡೂ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳು, ವಿವಿಧ ನೋಡೆಲ್ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply