ಮಂಗಳೂರಿನಲ್ಲಿ ಹುಲಿ ವೇಷ ಕುಣಿತಕ್ಕೆ  ಜೈ 

ಮಂಗಳೂರು: ದೇವಸ್ಥಾನದಲ್ಲಿ‌ ದಸರಾ ಅಚರಣೆಯ ಸಂದರ್ಭ ಸಂಪ್ರದಾಯಕ್ಕೆ ಯಾವುದೇ ಧಕ್ಕೆ ಬಾರದಂತೆ ಸಂಪ್ರ ದಾಯ ಪ್ರಕಾರ ಹುಲಿ ವೇಷ ಕುಣಿತಕ್ಕೆ ಈ ಬಾರಿ ದ.ಕ ಜಿಲ್ಲಾಡಳಿತ ಅವಕಾಶ ಕಲ್ಪಿಸುವ ವಿಶ್ವಾಸವಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.

ಕೊರೋನದ ಹಿನ್ನೆಲೆ ದಸರಾ ಸಂದರ್ಭದಲ್ಲಿ ಹುಲಿ ವೇಷ ಕುಣಿತಕ್ಕೆ ದ.ಕ ಜಿಲ್ಲಾಡಳಿತ ಸಮ್ಮತಿಸಿರಲ್ಲಿಲ್ಲ. ಆದರೆ, ವಿವಿಧ ದೇವಸ್ಥಾನ ಹಾಗೂ ಶಾರದೋತ್ಸವ ಸಮಿತಿಯ ಪ್ರಮುಖರು ಅವಕಾಶ ನೀಡುವಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದರು.
ಕರಾವಳಿಯ ಸಂಪ್ರದಾಯಕ್ಕೆ ತಕ್ಕಂತೆ ಹುಲಿ ವೇಷ ಕುಣಿತಕ್ಕೆ ಅವಕಾಶ ನೀಡುವಂತೆ ಮನವಿ ಸಲ್ಲಿಸಲಾಗಿದೆ.

ಜತೆಗೆ ಸರಕಾರದ ಉನ್ನತ ಅಧಿಕಾರಿಗಳ ಜತೆಗೂ ಚರ್ಚಿಸಿದ್ದು ದೇವಸ್ಥಾನದ ಉತ್ಸವ ಹಾಗೂ ಶಾರದೋತ್ಸವ ಸಮಿತಿ ಕಾರ್ಯಕ್ರಮದಲ್ಲಿ ಕನಿಷ್ಠ ಸಂಖ್ಯೆಯಲ್ಲಿ ಹುಲಿ ವೇಷ ಕುಣಿತಕ್ಕೆ ಅವಕಾಶ ನೀಡುವಂತೆ ಕೋರಿದ್ದೇನೆ. ಹೀಗಾಗಿ ಸಂಪ್ರ ದಾಯದಂತೆ ಹುಲಿವೇಷ ಕುಣಿತಕ್ಕೆ ಜಿಲ್ಲಾಡಳಿತ ಅವಕಾಶ ನೀಡಲಿದೆ. ಯಾರೂ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಶಾಸಕ ಕಾಮತ್ ಹೇಳಿದ್ದಾರೆ.

 
 
 
 
 
 
 
 
 
 
 

Leave a Reply