Janardhan Kodavoor/ Team KaravaliXpress
26.6 C
Udupi
Thursday, August 11, 2022
Sathyanatha Stores Brahmavara

ಮದುವೆಗಳಲ್ಲಿ 50ಜನರಿಗಿಂತ ಅಧಿಕವಾಗಿ ಸೇರಿದ್ರೆ ಕಠಿಣ ಕ್ರಮ

ಬೆಂಗಳೂರು : ಕೋವಿಡ್ 19 ಸೋಂಕಿನ ಭೀತಿಯ ನಡುವೆಯೂ ಮದುವೆಗಳಿಗೆ ಅವಕಾಶ ಒದಗಿಸದ್ದರೂ ಕೇವಲ 50 ಜನರಿಗೆ ಮಾತ್ರವೇ ಸೀಮಿತವಾಗಿರಿಸಲಾಗಿತ್ತು. ಆದರೆ ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಹಿನ್ನಲೆ, 50 ಜನರಿಗಿಂತ ಹೆಚ್ಚು ಜನರು ಮದುವೆಗೆ ಸೇರುವಂತಿಲ್ಲ.  ಈಗ ಅನೇಕ ಮದುವೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುತ್ತಿರುವುದು ಕಂಡು ಬಂದಿದೆ. ಇನ್ನು ಇದರಿಂದ ಸೋಂಕಿನ ಪ್ರಕರಣಗಳೂ ಹೆಚ್ಚುತ್ತಿದೆ. ಕಟ್ಟು ನಿಟ್ಟಿನ ಕ್ರಮ ಮೀರಿ ಒಂದು ವೇಳೆ ಅದಕ್ಕಿಂತಲೂ ಹೆಚ್ಚಿನ ಜನರು ಸೇರಿದರೆ ಮದುವೆ ನಡೆಸುತ್ತಿರುವವರ ಮೇಲೆ ದಂಡ ವಿಧಿಸಲಾಗುತ್ತದೆ ಎಂಬುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಖಡಕ್ ಕ್ಕಾಗಿ ಎಚ್ಚರಿಸಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದೆಲ್ಲೆಡೆ ಕೊರೋನಾ ಸೊಂಕು ನಿಯಂತ್ರಣಕ್ಕಾಗಿ ಮಾಸ್ಕ್ ಧರಿಸುವುದರ ಕುರಿತಂತೆ ಮತ್ತಷ್ಟು ಕಠಿಣ ಕ್ರಮ ಜಾರಿಯಾಗಲಿದೆ ಎಂದಿದ್ದಾರೆ.ಮಾಸ್ಕ್ ಧರಿಸದೇ ನಗರಳಲ್ಲಿ ಓಡಾಡುವ ಜನರಿಗೆ ರೂ.1000 ದಂಡ ಮತ್ತು ಗ್ರಾಮೀಣ ಪ್ರದೇಶದಲ್ಲಿ ರೂ.500 ದಂಡವನ್ನು ಜನರಿಗೆ ವಿಧಿಸಲಾಗುತ್ತದೆ ಎಂದು ತಿಳಿಸಿದ್ದಾರೆ.ಕೊ

ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಮುಂಜಾಗ್ರತಾ ಕ್ರಮ ವಹಿಸಿ 50 ಜನರಿಗಷ್ಟೇ ಮದುವೆಯಲ್ಲಿ ಭಾಗವಹಿಸಲು ಮತ್ತು ಮದುವೆ ಕಾರ್ಯ ನಡೆಸಲು ಅನುಮತಿ ನೀಡಲಾಗಿದೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!