ಸಂಸದ ಅನಂತ್ ಕುಮಾರ್ ಹೆಗ್ಡೆಗೆ ಕೋವಿಡ್ ಪಾಸಿಟಿವ್

ನವದೆಹಲಿ: ಸಂಸತ್ ಮುಂಗಾರು ಅಧಿವೇಶನ ಆರಂಭವಾಗಿದ್ದು ಇದಕ್ಕೂ ಮುನ್ನ ಸಂಸದರಿಗೆ ಕಡ್ಡಾಯವಾಗಿ ಕೊರೋನಾ ಪರೀಕ್ಷೆ ಮಾಡಿಸಲಾಗಿತ್ತು. ಇದರಲ್ಲಿ 17 ಸಂಸದರಿಗೆ ಕೊರೋನಾ ಪಾಸಿಟಿವ್ ದೃಢ

ಸೆಪ್ಟೆಂಬರ್ 13ರಂದು ಸಂಸದರಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದ್ದು ಇದರಲ್ಲಿ 17 ಸಂಸದರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಬಿಜೆಪಿಯ 12 ಸಂಸದರು, ವೈಎಸ್ಆರ್ ಕಾಂಗ್ರೆಸ್ ನ 2, ಶಿವಸೇನೆ, ಡಿಎಂಕೆ ಮತ್ತು ಆರ್ಎಲ್ಪಿ ಪಕ್ಷದ ತಲಾ ಒಬ್ಬ ಸಂಸದರಿಗೆ ಕೊರೋನಾ ದೃಢಪಟ್ಟಿದೆ.

ಕೊರೋನಾಗೆ ತುತ್ತಾಗಿರುವ ಬಿಜೆಪಿಯ ಸಂಸದ ಸುಕಾಂತ್ ಮಜೂಂದಾರ್ ತಮಗೆ ಕೊರೋನಾ ಪಾಸಿಟಿವ್ ಬಂದಿರುವುದನ್ನು ಟ್ವೀಟ್ ಮೂಲಕ ತಿಳಿಸಿದ್ದಾರೆ. ಇನ್ನು ಸಂಸದ ಅನಂತ್ ಕುಮಾರ್ ಹೆಗಡೆ ಮತ್ತು ಮೀನಾಕ್ಷಿ ಲೇಕಿಗೂ ಕೊರೋನಾ.

 
 
 
 
 
 
 
 
 
 
 

Leave a Reply