18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಮೇ 1 ರಿಂದ ಕೋವಿಡ್ ಲಸಿಕೆ ​~ ​ಕೇಂದ್ರ ಸರ್ಕಾರ

Portrait of happy teens looking at camera with smiles
ನವದೆಹಲಿ: ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ನಾಗರಿಕರಿಗೂ ಮೇ 1 ರಿಂದ ಕೊರೊನಾ ಲಸಿಕೆ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.​ ಸದ್ಯ ಈಗ 45 ವರ್ಷ ಮೇಲ್ಪಟ್ಟವರಿಗೆ ಮಾತ್ರ ಲಸಿಕೆ ಪಡೆದುಕೊಳ್ಳಲು ಅವಕಾಶವಿದೆ.
ಆದರೆ ಕೋವಿಡ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಿಯಮವನ್ನು ಸಡಿಲಿಕೆ ಮಾಡಿದೆ. ಜನವರಿ 16ರಿಂದ ಕೊವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಲಸಿಕೆ ವಿತರಣಾ ಪ್ರಕ್ರಿಯೆ ಆರಂಭವಾಗಿದ್ದು, ಆರಂಭದಲ್ಲಿ ಆರೋಗ್ಯ ಸಿಬ್ಬಂದಿ ಬಳಿಕ ಮುಂಚೂಣಿಯಲ್ಲಿರುವ ಸರ್ಕಾರಿ ಸಿಬ್ಬಂದಿಗೆ ಲಸಿಕೆ ನೀಡಲಾಗಿತ್ತು.
ಮಾರ್ಚ್ 1 ರಿಂದ ಹಿರಿಯ ನಾಗರಿಕರು ಹಾಗೂ 45 ವರ್ಷ ಮೇಲ್ಪಟ್ಟ 2ಕ್ಕೂ ಹೆಚ್ಚು ಖಾಯಿಲೆಯಿಂದ ನರಳುತ್ತಿರುವವರಿಗೆ ಲಸಿಕೆ ನೀಡಲಾಗುತ್ತಿದೆ. ಏ.1ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ನೀಡಲಾಗುತ್ತಿ​​ದೆ.
 
 
 
 
 
 
 
 
 
 
 

Leave a Reply