ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಜೂನ್ 21 ಶುಭ ಸೋಮವಾರ 

ಬೆಂಗಳೂರು : ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಜೂನ್.21ರ ಸೋಮವಾರದಿಂದ ಲಸಿಕಾ ಅಭಿಯಾನ ಆರಂಭವಾಗಲಿದೆ. ಈ ಮೂಲಕ ರಾಜ್ಯದಲ್ಲಿ 5 ರಿಂದ 7 ಲಕ್ಷ ಜನರಿಗೆ ಲಸಿಕೆ ಬೇಡಿಕೆ ಇದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದಂತ ಅವರು, ಜೂನ್.21ರ ಸೋಮವಾರದಿಂದ ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನ್ ಮೇಳ ನಡೆಸಲಾಗುತ್ತಿದೆ. 18 ರಿಂದ 45 ವರ್ಷ ಮೇಲ್ಪಟ್ಟವರಿಗೆ 5 ರಿಂದ 7 ಲಕ್ಷ ಜನರಿಗೆ ಲಸಿಕೆ ನೀಡೋ ಗುರಿಯನ್ನು ಹೊಂದಲಾಗಿದೆ. ಇದರ ಮಧ್ಯೆಯೂ 2ನೇ ಡೋಸ್ ಲಸಿಕೆ ಪಡೆಯೋರಿಗೆ ಯಾವುದೇ ಸಮಸ್ಯೆ ಇಲ್ಲ ಎಂದರು.

 
 
 
 
 
 
 
 
 
 
 

Leave a Reply