ಉಡುಪಿಯಲ್ಲಿ ಇಂದು 812 ನೆಗೆಟಿವ್/167 ಪಾಸಿಟಿವ್

ಕೋವಿಡ್-19 ಸಂಬಂಧಿಸಿದಂತೆ ಉಡುಪಿ ಜಿಲ್ಲೆಯಲ್ಲಿ ಇಂದು 812 ಮಂದಿಗೆ ನೆಗೆಟಿವ್ ಬಂದಿದೆ ಮತ್ತು 167 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಉಡುಪಿ ತಾಲೂಕಿನಲ್ಲಿ 92, ಕುಂದಾಪುರ 19 , ಕಾರ್ಕಳ 52 ಮತ್ತು ಹೊರ ಜಿಲ್ಲೆಗೆ ಸಂಬಂಧಿಸಿದಂತೆ 4 ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಜಿಲ್ಲೆಯಲ್ಲಿ ಇಂದು 250 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿಂದು ಕೋವಿಡ್-19 ಸಂಬಂಧಿಸಿದಂತೆ 3 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಉಡುಪಿಯಲ್ಲಿ 9601 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 2221 ಸಕ್ರಿಯ ಪ್ರಕರಣಗಳು ಉಳಿದಿವೆ.

 
 
 
 
 
 
 
 
 
 
 

Leave a Reply