ಆದರ್ಶ ಆಸ್ಪತ್ರೆ: ಹೃದಯ ದಿನಾಚರಣೆ ಸಪ್ತಾಹ ಉದ್ಘಾಟನೆ

ಉಡುಪಿ, ಸೆ. 29: ಆದರ್ಶ ಆಸ್ಪತ್ರೆ ಉಡುಪಿ ಹಾಗೂ ಆದರ್ಶ ಚಾರಿಟೇಬಲ್ ಟ್ರಸ್ಟ್ (ರಿ.) ಇದರ ಆಶ್ರಯದಲ್ಲಿ ವಿಶ್ವ ಹೃದಯ ದಿನದ ಅಂಗವಾಗಿ ಆಯೋಜಿಸಿರುವ ಹೃದಯ ದಿನಾಚರಣೆ ಸಪ್ತಾಹದ ಉದ್ಘಾಟನೆಯನ್ನು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ನೆರವೇರಿಸಿ ಹೃದಯದ ಆರೋಗ್ಯದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಲ್ಲಿ ವೈದ್ಯರ ಕಾರ್ಯದ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು.

ಆದರ್ಶ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಜಿ. ಎಸ್. ಚಂದ್ರಶೇಖರ್, ಹೃದ್ರೋಗ ತಜ್ಞರಾದ ಡಾ. ವಿಶು ಕುಮಾರ್ ಬಿ., ಡಾ. ಶ್ರೀಕಾಂತ ಕೃಷ್ಣ, ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಮಲ ಚಂದ್ರಶೇಖರ್ ಮೊದಲಾದವರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply