ವಿಶ್ವ ಹೃದಯ ದಿನದ ಅಂಗವಾಗಿ ಬೃಹತ್ ಜಾಥಾ

ಉಡುಪಿಯ ಆದರ್ಶ ಆಸ್ಪತ್ರೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ , ಹಾಗೂ ಜಿಲ್ಲಾ ಸರ್ವೇಕ್ಷಣಾ ಘಟಕ ಉಡುಪಿ ಇದರ ಆಶ್ರಯದಲ್ಲಿ ವಿಶ್ವ ಹೃದಯ ದಿನದ ಅಂಗವಾಗಿ ದಿನಾಂಕ 01.10.2022ನೇ ಶನಿವಾರ ಬೆಳಿಗ್ಗೆ 9.00ರಿಂದ ಮಧ್ಯಾಹ್ನ 12.00 ರವರೆಗೆ ಬೃಹತ್ ಜಾಥಾವನ್ನು ಆಯೋಜಿಸಲಾಗಿದೆ. ಈ ಜಾಥಾವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಇಂಧನ ಸಚಿವರಾದ ಸನ್ಮಾನ್ಯ ಶ್ರೀ ವಿ ಸುನಿಲ್ ಕುಮಾರ್ ರವರು ದೀಪ ಬೆಳಗಿಸುವ ಮೂಲಕ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಉದ್ಘಾಟಿಸ ಲಿರುವರು.

ಉದ್ಘಾಟನಾ ಸಮಾರಂಭದ ಬಳಿಕ ಜಾಥಾವು ಅಜ್ಜರಕಾಡು ಜೋಡುಕಟ್ಟೆ, ಬಿಗ್ ಬಜಾರ್, ಡಯಾನ ಸರ್ಕಲ್, ಕೆ.ಎಂ ಮಾರ್ಗದಲ್ಲಿ ಸಾಗಿ ಬಂದು ಕ್ಲೋಕ್ ಟವರ್‌ನಲ್ಲಿ ತಿರುವು ಪಡೆದು ಆದರ್ಶ ಆಸ್ಪತ್ರೆಯಲ್ಲಿ ಸಮಾಪನಗೊಳ್ಳುವುದು. ಜಾಥಾದಲ್ಲಿ ವಿವಿಧ ನರ್ಸಿಂಗ್ ಕಾಲೇಜುಗಳ ಸರಿಸುಮಾರು ೧೮೦೦ ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದು, ಹೃದ್ರೋಗದ ಬಗ್ಗೆ ಮಾಹಿತಿ ನೀಡುವ ಹಾಗೂ ಜಾಗೃತಿ ಮೂಡಿಸುವ ವಿವಿಧ ಫಲಕಗಳ ಪ್ರದರ್ಶನ, ವ್ಯಾಯಾಮ, ಹೃದಯ ಸ್ತಂಭನವಾದಾಗ ಅನುಸರಿಸಬೇಕಾದ ಕ್ರಮಗಳ ಪ್ರಾತ್ಯಕ್ಷಿತೆ ಇತ್ಯಾದಿಗಳನ್ನು ಆಯೋಜಿಸ ಲಾಗಿದೆ. ಈ ಜಾಥಾದಲ್ಲಿ ವೈದ್ಯರು, ಗಣ್ಯ ವ್ಯಕ್ತಿಗಳು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ತದನಂತರ ಆಸ್ಪತ್ರೆಯಲ್ಲಿ ಹೃದ್ರೋಗ ತಜ್ಞರಿಂದ ಉಚಿತ ಆರೋಗ್ಯ ತಪಾಸಣೆ, ರಕ್ತದ ಸಕ್ಕರೆ ಅಂಶ , ಕೊಬ್ಬಿನಾಂಶ ಹಾಗೂ ಇ ಸಿ ಜಿ ಪರೀಕ್ಷೆಗಳನ್ನು ಉಚಿತವಾಗಿ ಮಾಡಲಾಗುವುದು. ತಪಾಸಣೆಯ ವೇಳೆ ಅಗತ್ಯವೆಂದು ಕಂಡುಬರುವವರಿಗೆ ಹೃದಯದ ಸ್ಕ್ಯಾನಿಂಗ್  ಹಾಗೂ ಟಿ ಎಂ ಟಿ ಪರೀಕ್ಷೆಗಳನ್ನು ಉಚಿತವಾಗಿ ಹಾಗೂ ಹೃದಯದ ಆಂಜಿಯೋಗ್ರಾಮ್ ಹಾಗೂ ಆಂಜಿಯೋಪ್ಲಾಸ್ಟಿ ಚಿಕಿತ್ಸೆಯನ್ನು ರಿಯಾಯಿತಿ ದರದಲ್ಲಿ ಮಾಡಲಾಗುವುದು.

ಸಾರ್ವಜನಿಕರು ಅಪಾರ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಆದರ್ಶ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ, ಡಾ| ಜಿ.ಎಸ್. ಚಂದ್ರಶೇಖರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಶ್ರೀ ನಾಗಭೂಷಣ ಉಡುಪ, ಜಿಲ್ಲಾ ಸರ್ಜನ್ ಮಧುಸೂದನ್ ನಾಯಕ್ ಹಾಗೂ ಜಿಲ್ಲಾ ಸರ್ವೇಕ್ಷಣಾಧಿಕಾರಿ ಶ್ರೀಮತಿ ನಾಗರತ್ನ ರವರು ತಿಳಿಸಿರುತ್ತಾರೆ

 
 
 
 
 
 
 
 
 
 
 

Leave a Reply