ಜಿಲ್ಲಾಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ 

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಉಡುಪಿ ಜಿಲ್ಲೆ ಇದರ ವತಿಯಿಂದ ವಿಶ್ವ ನಾಯಕ, ದೇಶದ ಹೆಮ್ಮೆಯ ಪ್ರಧಾನಿ ಸನ್ಮಾನ್ಯ ನರೇಂದ್ರ ಮೋದಿಯವರ 70ನೇ ಜನ್ಮ ದಿನಾಚರಣೆಯ ಉಡುಪಿ ಜಿಲ್ಲಾಸ್ಪತ್ರೆಯ ಸಮಸ್ತ ರೋಗಿಗಳಿಗೆ ಹಣ್ಣು ಹಂಪಲು ವಿತರಣಾ ಕಾರ್ಯಕ್ರಮ ಜರಗಿತು.
ಈ ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಸುರೇಂದ್ರ ಪಣಿಯೂರ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಸರ್ಜನ್ ಡಾ! ಮಧುಸೂದನ್ ನಾಯಕ್ ರವರನ್ನು ಮುಖ್ಯ ಅತಿಥಿ ಗುರ್ಮೆ ಸುರೇಶ್ ಶೆಟ್ಟಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸತೀಶ್ ಕುಲಾಲ್ ಕಡಿಯಾಳಿ, ಉಪಾಧ್ಯಕ್ಷರಾದ ದಿನೇಶ್ ಎರ್ಮಾಳು, ಲೀಲಾ ಆರ್. ಅಮೀನ್, ಕೋಶಾಧಿಕಾರಿ ಗಣೇಶ್ ಕುಮಾರ್ ಸಂಪಿಗೆನಗರ ಉದ್ಯಾವರ, ಕಾರ್ಯದರ್ಶಿ ಹರೀಶ್ ಸಾಲಿಯಾನ್ ಸಮಿತಿ ಸದಸ್ಯರಾದ ಶ್ರೀಧರ ಅಮೀನ್ ಮಣಿಪುರ, ಕೃಷ್ಣ ಕುಲಾಲ್ ವರ್ವಾಡಿ, ಸತೀಶ್ ಪೂಜಾರಿ ಕುಕ್ಕಿಕಟ್ಟೆ ಮತ್ತಿತರರು ಉಪಸ್ಥಿತರಿದ್ದರು

Leave a Reply