ಉಡುಪಿ ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ಮೊದಲ ಬಲಿ ಪಡೆದಿದೆ.  

ಉಡುಪಿ : ಕೊರೊನಾ ವೈರಸ್ ಸೋಂಕಿನ ನಡುವಲ್ಲೇ ಕರಾವಳಿಯ ಜನತೆಗೆ ಕಪ್ಪು ಶಿಲೀಂದ್ರ ಸೋಂಕು ಆಘಾತವನ್ನು ಮೂಡಿಸಿದೆ. ಉಡುಪಿ ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ಮೊದಲ ಬಲಿ ಪಡೆದಿದೆ.

ಬ್ಲ್ಯಾಕ್ ಫಂಗಸ್ ಗೆ ತುತ್ತಾಗಿ ಉಡುಪಿ ನಗರದ ಖಾಸಗಿ ಆಸ್ಪತ್ರೆಯ ವೆಂಟಿಲೇಟರ್ ನಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದ ಸಂತೆಕಟ್ಟೆಯ 76 ವರ್ಷ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಮಣಿಪಾಲದ ಆಸ್ಪತ್ರೆಯಲ್ಲಿ ದಾವಣಗೆರೆ, ಹರಿಹರ, ಹುಬ್ಬಳ್ಳಿ, ಚಿತ್ರದುರ್ಗ, ಕೊಪ್ಪಳ, ರಾಣಿಬೆನ್ನೂರು ಹಾಗೂ ಧಾರವಾಡ ದ ಒಟ್ಟು 7 ಮಂದಿ ಬ್ಲ್ಯಾಕ್ ಫಂಗಸ್ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಅಲ್ಲದೇ ಉಡುಪಿ ಜಿಲ್ಲೆಯ ಪಡುಬಿದ್ರಿಯ ನಂದಿ ಕೂರು ನಿವಾಸಿಯೋರ್ವರಿಗೆ ಕೂಡ ಸೋಂಕು ಕಾಣಿಸಿಕೊಂಡಿ ದ್ದು, ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ ಎಂದು ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಚಂದ್ರಚೂಡ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply