ಬ್ರಾಹ್ಮಣ ಮಹಾಸಭಾ~ ರಕ್ತದಾನ, ಉಚಿತ ಆರೋಗ್ಯ ತಪಾಸಣಾ ಶಿಬಿರ

ಉಡುಪಿ : ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾ ಸಭಾ, ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ, ತುಳು ಶಿವಳ್ಳಿ ಮಾಧ್ವ ಮಹಾಮಂಡಲ, ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ಇವರ ಸಂಯುಕ್ತ ಆಶ್ರಯದಲ್ಲಿ ಮತ್ತು ಮಣಿಪಾಲ ಕೆ.ಎಂ.ಸಿ. ರಕ್ತ ನಿಧಿ ವಿಭಾಗ, ಬ್ರಹ್ಮಾವರ ಮಹೇಶ್ ಆಸ್ಪತ್ರೆ, ಮಂಗಳೂರು ಎ.ಜೆ. ಆಸ್ಪತ್ರೆಗಳ ಸಹಯೋಗದೊಂದಿಗೆ ಮೇ 1ರಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ವರೆಗೆ ನಗರದ ಗೋವಿಂದ ಕಲ್ಯಾಣ ಮಂಟಪದಲ್ಲಿ ರಕ್ತದಾನ ಶಿಬಿರ, ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಉಚಿತ ದಂತ

ತಪಾಸಣೆ ಹಾಗೂ ಚಿಕಿತ್ಸಾ ಕಾರ್ಯಕ್ರಮ ನಡೆಯಲಿದೆ ಎಂದು ಉಡುಪಿ ತಾಲೂಕು ಬ್ರಾಹ್ಮಣ ಮಹಾ ಸಭಾದ ಅಧ್ಯಕ್ಷ ಎಂ ಮಂಜುನಾಥ ಉಪಾಧ್ಯ ತಿಳಿದ್ದಾರೆ. ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಕಾರ್ಯಕ್ರಮವನ್ನು ಉಡುಪಿ ಶ್ರೀಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಸ್ವಾಮೀಜಿ ಅವರು ಉದ್ಘಾಟಿಸಿ ಆಶೀರ್ವಚನ ನೀಡಲಿದ್ದಾರೆ.

ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಮಂಜುನಾಥ ಉಪಾಧ್ಯಾಯ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಹಾಗೂ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾ ಅಧ್ಯಕ್ಷರಾದ ವೈ. ಸುಧಾಕರ ಭಟ್ ಕಾರ್ಕಳ, ಮಕ್ಕಳ ತಜ್ಞರಾದ ಡಾ. ರಾಕೇಶ್ ಅಡಿಗ, ದಂತ ವೈದ್ಯರಾದ ಡಾ. ಮಿಥುನ್ ಎಂ. ಉಪಾಧ್ಯಾಯ ಪಾಲ್ಗೊಳ್ಳಲಿದ್ದಾರೆ.

ತು.ಶಿ.ಮಾ.ಮ ಇದರ ಅಧ್ಯಕ್ಷರಾದ ರವಿಪ್ರಕಾಶ್ ಭಟ್, ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್  ಅಧ್ಯಕ್ಷರಾದ ಚೈತನ್ಯ ಎಮ್.ಕೆ. ದಿವ್ಯ ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಿದರು. ಹಾಗೂ ಉಚಿತ ತಪಾಸಣೆ ಹಾಗೂ ಚಿಕಿತ್ಸೆ, ಇ.ಸಿ.ಜಿ., ರೂಟಿರ್ನ ಬ್ಲಡ್ ಮತ್ತು ಬ್ಲಡ್ ಶುಗರ್ ಔಷಧಿ, ದಂತದ ತಪಾಸಣೆ ಉಚಿತವಾಗಿ ನಡೆಯಲಿದ್ದು, ಸಮಾಜ ಬಾಂಧವರೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಳ್ಳಬೇಕಾಗಿ ಕೇಳಿಕೊಂಡರು.

ಸುದ್ದಿಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾ ಕಾರ್ಯದರ್ಶಿ ಸಂದೀಪ್ ಕುಮಾರ್ ಮಂಜ,  ತು.ಶಿ.ಮಾ.ಮ ಅಧ್ಯಕ್ಷ ರವಿಪ್ರಕಾಶ್ ಭಟ್, ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ನ ಕಾರ್ಯದರ್ಶಿ ವಿವೇಕಾನಂದ ಪಾಂಗಣ್ಣಾಯ, ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ ಇದರ ಉಪಾಧ್ಯಕ್ಷರಾದ ಶ್ರೀಕಾಂತ್ ಉಪಾಧ್ಯಾಯ,‌ ಜೊತೆ ಕಾರ್ಯದರ್ಶಿ ನಾಗರಾಜ ಉಪಾಧ್ಯಾಯ, ಸಂಘಟನಾ ಕಾರ್ಯದರ್ಶಿ ಜಯರಾಮ ಆಚಾರ್ ಉಪಸ್ಥಿತರಿದ್ದರು

 
 
 
 
 
 
 
 
 
 
 

Leave a Reply