Janardhan Kodavoor/ Team KaravaliXpress
31.6 C
Udupi
Wednesday, December 8, 2021
Sathyanatha Stores Brahmavara

ಬಜಗೋಳಿ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಬೃಹತ್ ವೈದ್ಯಕೀಯ ತಪಾಸಣಾ ಶಿಬಿರ

ಉಡುಪಿ : ಜಿಲ್ಲಾ ವೈದ್ಯಕೀಯ ಪ್ರಕೋಷ್ಠ ಮತ್ತು ರೋಟರಿ ಆಸ್ಪತ್ರೆ ಕೆಎಂಸಿ ಆಸ್ಪತ್ರೆ ಮಣಿಪಾಲ ಇದರ ಸಂಯುಕ್ತ ಆಶ್ರಯದಲ್ಲಿ ಬಜಗೋಳಿ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನ.14 ರಂದು ಬೃಹತ್ ವೈದ್ಯಕೀಯ ತಪಾಸಣಾ ಶಿಬಿರ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಉಡುಪಿ ಜಿಲ್ಲಾ ಉಸ್ತುವಾರಿ, ಇಂಧನ ಸಚಿವ ವಿ.ಸುನಿಲ್ ಕುಮಾರ್ ಆರೋಗ್ಯವೇ ಭಾಗ್ಯವೆಂಬಂತೆ ಆರೋಗ್ಯ ಅತ್ಯಂತ ಮಹತ್ವದ್ದಾಗಿದೆ ವೈದ್ಯಕೀಯ ಪ್ರಕೋಷ್ಠದಿಂದ ಉತ್ತಮ ಕಾಯ೯ ನಡೆಯುತ್ತಿರುವುದು ಅಭಿನಂದನೀಯ ಎಂದರು.

ಅಧ್ಯಕ್ಷತೆಯನ್ನು ಸಂಘಟಕ ಹಾಗೂ ವೈದ್ಯಕೀಯ ಪ್ರಕೋಷ್ಠ ದ ತಾಲೂಕು ಸಂಚಾಲಕ ಡಾ.ರಾಮದಾಸ್ ಹೆಗ್ಡೆ ವಹಿಸಿದ್ದರು.

ರೋಟರಿ ಆಸ್ಪತ್ರೆಯ ಡಾ. ಚಿದಾನಂದ ಕುಲಕಣಿ೯, ಜಿಲ್ಲಾ ಸಂಚಾಲಕ ಡಾ. ರಾಮಚಂದ್ರ ಕಾಮತ್, ಗ್ರಾ.ಪಂ ಅಧ್ಯಕ್ಷ ಸುರೇಶ್, ಶಾಲಾ ಮುಖ್ಯ ಶಿಕ್ಷಕರು ಮತ್ತು ಇತರ ವೈದ್ಯರು ಉಪಸ್ಥಿತರಿದ್ದರು. ಶಿಬಿರದಲ್ಲಿ ಸಾಮಾನ್ಯ ಆರೋಗ್ಯ’ಕಣ್ಣು, ಚರ್ಮರೋಗ ಸೇರಿದಂತೆ ವಿವಿಧ ವಿಭಾಗದಲ್ಲಿ ಸುಮಾರು 400 ಜನರು ಶಿಬಿರದಲ್ಲಿ ಪ್ರಯೋಜನ ಪಡೆದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!