ದೇಶಾದ್ಯಂತ ಮಂಗಳವಾರ 3.56ಲಕ್ಷ ಗುಣಮುಖ

ನವದೆಹಲಿ: ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 3,29,942 ಹೊಸ ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2,29,92,517 ಕ್ಕೆ ಏರಿಯಾಗಿದೆ. ಇಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಕುರಿತು ತಿಳಿಸಿದೆ.

3,56,082 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 37,15,221 ಸಕ್ರಿಯ ಪ್ರಕರಣಗಳಿದ್ದು ಒಟ್ಟು 1,90,27,304 ಮಂದಿ ಗುಣಮುಖರಾಗಿದ್ದಾರೆ.

ಬಹಳ ಸಮಯದ ನಂತರ ಪಾಸಿಟಿವ್ ಪ್ರಕರಣಗಳಿಗಿಂತ ಗುಣಮುಖರಾದವರ ಸಂಖ್ಯೆ ಹೆಚ್ಚು ಇರುವುದು ಉತ್ತಮ ಬೆಳವಣಿಗೆಯಾಗಿದೆ.ಕಳೆದ 24 ಗಂಟೆಗಳಲ್ಲಿ 3876 ಮಂದಿ ಸಾವನ್ನಪ್ಪಿದ್ದಾರೆ, ಇಲ್ಲಿಯವರೆಗೆ ಒಟ್ಟು 2,49,992 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

ಇಂದು 18,50,110 ಮಾದರಿಗಳನ್ನು ಸಂಗ್ರಹಿಸಿ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, 30,56,00,187 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಮಾಹಿತಿ ನೀಡಿದೆ.ಇಲ್ಲಿಯವರೆಗೆ ಒಟ್ಟು 17,27,10,066 ಡೋಸ್ ಲಸಿಕೆ ನೀಡಲಾಗಿದೆ.

 
 
 
 
 
 
 
 
 
 
 

Leave a Reply