ಉಡುಪಿ: 454 ಗುಣಮುಖ

ಉಡುಪಿ: ಜಿಲ್ಲೆಯಲ್ಲಿ ಶನಿವಾರ 174 ಮಂದಿಗೆ ಸೋಂಕು ದೃಢಪಟ್ಟಿದ್ದು, 454 ಮಂದಿ ಗುಣಮುಖರಾಗಿದ್ದಾರೆ. ಕಾರ್ಕಳದ ಇಬ್ಬರು ಪುರುಷರು ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ 1,885 ಸಕ್ರಿಯ ಪ್ರಕರಣಗಳಿವೆ.

ಇಂದು 3,464 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದ್ದು, ಆ ಪೈಕಿ 162 ಮಂದಿ ಮನೆ ಆರೈಕೆ ಹಾಗೂ 12 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಉಡುಪಿಯ 72, ಕುಂದಾಪುರ 55, ಕಾರ್ಕಳ 44 ಮತ್ತು ಹೊರಜಿಲ್ಲೆಗಳ 3 ಮಂದಿ ಸೋಂಕಿತರು.ಕಾರ್ಕಳದ 57 ಮತ್ತು 63ರ ಹರೆಯದ ಇಬ್ಬರು ಪುರುಷರು ಮೃತಪಟ್ಟಿದ್ದಾರೆ ಎಂದು ಡಿಎಚ್.ಓ ಡಾ. ನಾಗಭೂಷಣ ಉಡುಪ ಮಾಹಿತಿ ನೀಡಿದ್ದಾರೆ.

 
 
 
 
 
 
 
 
 
 
 

Leave a Reply