ಉಡುಪಿ: 219 ಮಂದಿ ಗುಣಮುಖ

ಉಡುಪಿ: ಜಿಲ್ಲೆಯಲ್ಲಿ 79 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಉಡುಪಿ ತಾಲೂಕು- 29, ಕುಂದಾಪುರ-29, ಕಾರ್ಕಳ- 20 ಮತ್ತು ಹೊರ ಜಿಲ್ಲೆಯ ಓರ್ವ ವ್ಯಕ್ತಿ ಸೋಂಕಿಗೆ ಒಳಗಾಗಿದ್ದಾರೆ.

 219 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 63656 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1520 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ 2 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 375 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 

ಜೂನ್ 21 ರಂದು 3027 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇಲ್ಲಿಯವರೆಗೆ ಒಟ್ಟು 661579 ಮಂದಿಯನ್ನು ಪರೀಕ್ಷಿಸಲಾಗಿದೆ.

 
 
 
 
 
 
 
 
 
 
 

Leave a Reply