ಉಡುಪಿ ಜಿಲ್ಲೆಯಲ್ಲಿ ಸೋಮವಾರ ಕೇವಲ ಮೂವರಲ್ಲಿ ಕೊರೊನಾ ಸೊಂಕು ಧೃಡ

ಕೋವಿಡ್-19 ಸೋಂಕು ಉಡುಪಿ ಜಿಲ್ಲೆಯಲ್ಲಿ ನಿಯಂತ್ರಣಕ್ಕೆ ಬರುತ್ತಿದ್ದು, ಸೋಂಕಿನ ಪ್ರಕರಣಗಳ ಸಂಖ್ಯೆ ತೀವ್ರವಾಗಿ ಕಡಿಮೆಯಾಗುತ್ತಿದೆ. ಸೋಮವಾರದಂದು ಕೇವಲ ಮೂರು ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ.

ಈ ಕುರಿತು ಮಾಹಿತಿ ನೀಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್‌ಚಂದ್ರ ಸೂಡ ಸರಾಸರಿ 188 ದಿನಗಳ ನಂತರ ಮೂರು ಪ್ರಕರಣಗಳು ದಾಖಲಾಗುತ್ತಿವೆ ಎಂದು ತಿಳಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಜೂನ್ 15ರಂದು ಮೂರು ಪಾಸಿಟಿವ್ ಪ್ರಕರಣಗಳ ಪತ್ತೆಯಾಗಿದ್ದವು.

ಮೇ 22 ಮತ್ತು 26ರಂದು ಕೂಡ ತಲಾ ಮೂರು ಪಾಸಿಟಿವ್ ಪ್ರಕರಣಗಳು ಧೃಡಪಟ್ಟಿದ್ದವು. ಸೋಮವಾರ ಜಿಲ್ಲೆಯಲ್ಲಿ 70 ಮಂದಿಯಲ್ಲಿ ಮಾತ್ರ ಸೋಂಕು ಸಕ್ರಿಯವಾಗಿದೆ.ಭಾನುವಾರ ಜಿಲ್ಲೆಯಲ್ಲಿ ಒಟ್ಟು 719 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಅದರಲ್ಲಿ 716 ಮಂದಿಯ ಕೋವಿಡ್ ವರದಿ ನೆಗೆಟಿವ್ ಬಂದಿದೆ. ಈವರೆಗೆ ಜಿಲ್ಲೆಯಲ್ಲಿ 22,961 ಜನರಿಗೆ ಸೋಂಕು ತಗುಲಿದ್ದು, 22703 ಮಂದಿ ಚಿಕಿತ್ಸೆಯ ಬಳಿಕ ಗುಣಮುಖರಾಗಿದ್ದಾರೆ.

ಹಾಗೆ 188 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ಚಂದ್ರ ಸೂಡ ಮಾಹಿತಿ ನೀಡಿದ್ದಾರೆ.

 
 
 
 
 
 
 
 
 
 
 

Leave a Reply