ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್ ವ್ಯಾಕ್ಸಿನ್ ಅಭಿಯಾನಕ್ಕೆ ಚಾಲನೆ 

ಉಡುಪಿ:ಜನರು ಬಹು ನಿರೀಕ್ಷೆ ಯಲ್ಲಿ ಕಾದಿದ್ದ ಕೋವಿಡ್ ಲಸಿಕೆಗೆ ಇಂದು ಪ್ರಧಾನಿ ಆನ್ ಲೈನ್ ಮೂಲಕ ಚಾಲನೆ ನೀಡಿದ ಬೆನ್ನಲ್ಲೇ ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕಾ ಅಭಿಯಾನಕ್ಕೆ ಚಾಲನೆ ದೊರೆಯಿತು.

ಜಿಲ್ಲಾ ಆಸ್ಪತ್ರೆಯ ವೈದ್ಯರಿಗೆ ಮೊದಲ ಕೋವಿಡ್ ಲಸಿಕೆ ನೀಡಲಾಗಿದ್ದು, ಬಳಿಕ ಆಸ್ಪತ್ರೆಯ ಡಿ ಗ್ರೂಪ್ ಸಿಬ್ಬಂದಿ ಸಹಿತ ಎಲ್ಲ ಕೇಡರ್ ನ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ವಿತರಿಸಲಾಯಿತು. ಶನಿವಾರ ಮೊದಲ ದಿನವಾಗಿದ್ದು, ಉಡುಪಿ ನಗರ ಸಾರ್ವಜನಿಕ ಆರೋಗ್ಯ ಕೇಂದ್ರ, ಡಾ. ಟಿ. ಎಂ.ಎ. ಪೈ ಆಸ್ಪತ್ರೆ, ಕುಂದಾಪುರ ತಾಲೂಕು ಆಸ್ಪತ್ರೆ, ಕಂಡ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಕಾರ್ಕಳ ತಾಲೂಕು ಆಸ್ಪತ್ರೆಗಳ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಒಟ್ಟು 538 ಮಂದಿಗೆ ಮೊದಲ ಹಂತದಲ್ಲಿ ಲಸಿಕೆ ಹಾಕಲಾಗುತ್ತದೆ. 

ಜಿಲ್ಲಾಧಿಕಾರಿ ಜಿ. ಜಗದೀಶ, ಶಾಸಕರಾದ ಕೆ. ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಜಿ.ಪಂ. ಮುಖ್ಯಕಾರ್ಯ ನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ, ಜಿಲ್ಲಾ ಸರ್ಜನ್ ಡಾ. ಮಧುಸೂದನ್ ನಾಯಕ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಲಸಿಕಾ ಅಧಿಕಾರಿ ಡಾ. ಎಂ.ಜಿ. ರಾಮ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply