​​ಉಡುಪಿಯಲ್ಲಿ 50ಕ್ಕೂ ಹೆಚ್ಚು ಕೋವಿಡ್ ಪಾಸಿಟಿವ್ ಇರುವ ಗ್ರಾಮ ಪೂರ್ಣ ಲಾಕ್ ಡೌನ್!

ಕಳೆದ ಕೆಲ ದಿನಗಳಿಂದ ಜಿಲ್ಲೆಯಲ್ಲಿ ದಿನಾ ಪತ್ತೆಯಾಗುತ್ತಿರುವ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ. 900 ರ ಆಸುಪಾಸಿನಲ್ಲಿ ಪತ್ತೆಯಾಗುತ್ತಿದ್ದ ಕೋವಿಡ್ ಪಾಸಿಟಿವ್ ಪ್ರಕರಣಗಳು ಇದೀಗ 600 ರ ಅಂತರದಲ್ಲಿ ಪತ್ತೆಯಾಗುತ್ತಿದೆ.

ಅಲ್ಲದೆ ಈ ಮೂಲಕ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಇಳಿಮುಖವಾಗುತ್ತಿದೆ. ಆದರೂ ಹಲವೆಡೆ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ 50ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಸೋಂಕಿತರು ‌ಇರುವ ಗ್ರಾಮವನ್ನು ಬುಧವಾರ (ಜೂನ್ 2)ದಿಂದ ಸಂಪೂರ್ಣ ಲಾಕ್ ಡೌನ್ ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ. 
 
ಈ ಮೂಲಕ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಹರಡುವಿಕೆಯನ್ನು ತಡೆಗಟ್ಟಲು ಜಿಲ್ಲಾಡಳಿತ ಮುಂದಾಗಿದೆ ಎಂದು ತಿಳಿದು ಬಂದಿದೆ. ಸಂಪೂರ್ಣ ಲಾಕ್ ಡೌನ್ ಮಾಡಲಾಗುವ ಗ್ರಾಮ ಪಂಚಾಯತ್ ಗಳ ವಿವರ ಈ ಕೆಳಕಂಡಂತಿವೆ: 
ಶಿರೂರು, ಜಡ್ಕಲ್, ಕಂಬದಕೋಣೆ, ನಾಡ, ಕಾವ್ರಾಡಿ, ಹೊಂಬಾಡಿ – ಮಂಡಾಡಿ, ಕೋಟೇಶ್ವರ, ಹಾಲಾಡಿ, ಇಡೂರು- ಕುಂಜ್ಞಾಡಿ, ಆಜ್ರಿ, ಆಲೂರು, 38 ಕಳತ್ತೂರು, 80 ಬಡಗಬೆಟ್ಟು, ಅಲೆವೂರು, ಪೆರ್ಡೂರು, ತೆಂಕನಿಡಿಯೂರು, ಬೊಮ್ಮರಬೆಟ್ಟು, ಬೆಳಪು, ಬೆಳ್ಳೆ, ಪಡುಬಿದ್ರಿ, ಶಿರ್ವ, ಮಾಳ, ಈದು, ಕುಕ್ಕುಂದೂರು, ಕಡ್ತಲ, ಮರ್ಣೆ, ಪಳ್ಳಿ, ನಿಟ್ಟೆ, ಮಿಯಾರು, ಬೆಳ್ಮಣ್, ಬೆಳ್ವೆ, ಮುದ್ರಾಡಿ ಹಾಗೂ ವರಂಗ ಗ್ರಾಪಂಗಳು ಐದು ದಿನ ಸಂಪೂರ್ಣ ಲಾಕ್ ಡೌನ್ ಆಗಲಿವೆ.
 
 
 
 
 
 
 
 
 
 
 

Leave a Reply