ಉಡುಪಿ ಜಿಲ್ಲೆಯಲ್ಲಿ ಬರೋಬ್ಬರಿ 1.50 ಲಕ್ಷಕ್ಕೂ ಮಿಕ್ಕಿ ಸಾರ್ವಜನಿಕರ ಗಂಟಲ ದ್ರವ ಪರೀಕ್ಷೆ

ಉಡುಪಿ: ಕರ್ನಾಟಕದ ಇತರೆ ಜಿಲ್ಲೆಗಳಲ್ಲಿ ಕೊರೋನಾ ಪರೀಕ್ಷೆ ನಡೆಸುವ ಮುಂಚಿತವಾಗಿ ಉಡುಪಿ ಜಿಲ್ಲೆಯಲ್ಲಿ ಶಂಕಿತ ಕೋವಿಡ್ ರೋಗಿಗಳ ಪರೀಕ್ಷೆ ಪ್ರಾರಂಭಿಸಲಾಗಿತ್ತು. ಸದ್ಯ ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆಗಾಗಿ 1.50 ಲಕ್ಷಕ್ಕೂ ಗಂಟಲ ದ್ರವ ಸಂಗ್ರಹಿಸಲಾಗಿದೆ.

ಈ ಹಿಂದೆ ಫೆಬ್ರವರಿಯಲ್ಲಿ ಚೀನಾದಿಂದ ಮರಳಿದವರೊಂದಿಗೆ ವಿದೇಶದಿಂದ ಉಡುಪಿ ಜಿಲ್ಲೆಗೆ ಬಂದಿಳಿದವರಿಗೂ ಕೊರೋನಾ ಪರೀಕ್ಷೆ ಮಾಡಲಾಗಿತ್ತು. ಆನಂತರ ಕಳೆದೆಂಟು ತಿಂಗಳಿಂದ ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆಗೆ ಒಟ್ಟು 1,51,783 ಜನರ ಗಂಟಲ ದ್ರವದ ಮಾದರಿಯನ್ನು ಸಂಗ್ರಹಿಸಲಾಗಿದ್ದು, ಅದರಲ್ಲಿ ಶೇ. 13.54ರಷ್ಟು ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

ಕೊರೋನಾ ಪರೀಕ್ಷೆಗೆ ಒಳಪಟ್ಟವರಲ್ಲಿ 1,29,598 ಜನರಿಗೆ ಸೋಂಕು ಇಲ್ಲದಿರುವುದು ಧೃಢವಾಗಿದೆ. ಇನ್ನುಳಿದ 20,275 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇವರ ಪೈಕಿ 17,901 ಜನರು ಗುಣಮುಖರಾಗಿ ದ್ದು,  ಪ್ರಸ್ತುತ ಜಿಲ್ಲೆಯಲ್ಲಿ 2026 ಮಂದಿಯಲ್ಲಿ ಸೊಂಕು ಸಕ್ರಿಯವಾಗಿದೆ.

ಇನ್ನು ಬುಧವಾರದಂದು ಇಬ್ಬರು ಸಾವನ್ನಪ್ಪಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 170ಕ್ಕೆ ಏರಿಕೆಯಾಗಿದೆ.ಬುಧವಾರ ಉಡುಪಿ ಜಿಲ್ಲೆಯಲ್ಲಿ 197 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಇವರಲ್ಲಿ 67 ಮಂದಿಗೆ ಸೋಂಕಿನ ಲಕ್ಷಣಗಳಿವೆ. ಉಳಿದ 130 ಜನರಿಗೆ ರೋಗ ಲಕ್ಷಣಗಳಿಲ್ಲ. ಇದರಲ್ಲಿ 165 ಜನರು ಮನೆ ಆರೈಕೆಯನ್ನು ಆಯ್ದು ಕೊಂಡಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್‌ಚಂದ್ರ ಸೂಡ ಮಾಹಿತಿ ನೀಡಿದ್ದಾರೆ.

 
 
 
 
 
 
 
 
 
 
 

Leave a Reply