29 C
Udupi
Sunday, October 25, 2020

ಕೋವಿಡ್ ಜನಾಂದೋಲನ ಮಾಹಿತಿ ಕಾರ್ಯಕ್ರಮಕ್ಕೆ​ ಜಿಲ್ಲಾ ನ್ಯಾಯಾಧೀಶರಿಂದ ಚಾಲನೆ

ಉಡುಪಿ​: ​ಉಡುಪಿ ಜಿಲ್ಲೆಯಲ್ಲಿನ ಕೋವಿಡ್-​19 ಕೊರೋನಾ ರೋಗ​ ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕಾಗಿ, ​ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ನವದೆಹಲಿ ಹಾಗೂ ಕರ್ನಾಟಕ​ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೇಶನದ ಮೇರೆಗೆ, ಜಿಲ್ಲಾ ಕಾನೂನು ಸೇವೆಗಳ​ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ನ್ಯಾಯಾಂಗ ಇಲಾಖೆ, ಅಭಿಯೋಗ ಮತ್ತು ಸರ್ಕಾರಿ​ ವ್ಯಾಜ್ಯಗಳ ಇಲಾಖೆ, ಆರೋಗ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ​ ಸಂಪರ್ಕ ಇಲಾಖೆ ಮತ್ತು ವಕೀಲರ ಸಂಘ (ರಿ) ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಶನಿವಾರ ಜಿಲ್ಲಾ​ ನ್ಯಾಯಾಲಯದ ಆವರಣ ದಲ್ಲಿ ನಡೆದ, ಕೋವಿಡ್ ಜನಾಂದೋಲನ ಮಾಹಿತಿ ಕಾರ್ಯಕ್ರಮಕ್ಕೆ ಜಿಲ್ಲಾ ನ್ಯಾಯಾಧೀಶ​ ಜೆ.ಎನ್.ಸುಬ್ರಮಣ್ಯ ಚಾಲನೆ ನೀಡಿದರು.

ಈ ಜನಾಂದೋಲನ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿನ ಪ್ರತೀ ಮನೆಗೂ ಭೇಟಿ ನೀಡಿ, ಕೋವಿಡ್ ಕುರಿತು ಅರಿವುಮೂಡಿಸುವುದರ ಜೊತೆಗೆ ಕೋವಿಡ್ ನಿಯಂತ್ರಣಕ್ಕಾಗಿ ಮನೆಯವರಿಂದ ಪ್ರತಿಜ್ಞೆ ಮಾಡಿಸಲಾಗುವುದು ಎಂದು ಜಿಲ್ಲಾ​ ನ್ಯಾಯಾಧೀಶರು ಹೇಳಿದರು.​ ಜಿಲ್ಲಾಧಿಕಾರಿ ಜಿ.ಜಗದೀಶ್ ಮಾತನಾಡಿ, ಕೋವಿಡ್‌ಗೆ ಪೂರ್ಣ ಪ್ರಮಾಣದ ಲಸಿಕೆ ಬರುವವರೆಗೂ ಸಾರ್ವಜನಿಕರು​ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ, ಮಾಸ್ಕ್ ಧರಿಸುವುದು ಮತ್ತು ಆಗಾಗ್ಗೆ ಸುರಕ್ಷಿತ ಕೈ ತೊಳೆಯುವ​ ವಿಧಾನಗಳನ್ನು ಅನುಸರಿ​ ​ಸಬೇಕು, ಇಡೀ ಜಿಲ್ಲೆಯಾದ್ಯಂತ ಕೋವಿಡ್ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕುರಿತು​ ಮಾಹಿತಿ ನೀಡಲು ಕ್ರಿಯಾ ಯೋಜನೆ ರೂಪಿಸಲಾಗಿದ್ದು, ಪ್ರತೀ ಮನೆಗೆ ಮಾಹಿತಿ ತಲುಪಿಸಲಾಗುವುದು, ಕುಟುಂಬನ್ನು​ ಕೋವಿಡ್‌ನಿಂದ ರಕ್ಷಿಸುವುದು ಪ್ರತಿಯೊಬ್ಬ ಕುಟುಂಬ ಸದಸ್ಯನ ಜವಾಬ್ದಾರಿಯಾಗಿದೆ ಎಂದರು.


ಜಿಲ್ಲೆಯಲ್ಲಿ ಕೋವಿಡ್‌ನಿಂದ ಇದುವರೆಗೆ 179 ಮಂದಿ ಮೃತಪಟ್ಟಿದ್ದು, ಅದರಲ್ಲಿ ಶೇ. 75 ಕ್ಕಿಂತ ಹೆಚ್ಚುಸಾವುಗಳು 60 ವರ್ಷ ಮೇಲ್ಪಟ್ಟ ಹಾಗೂ ಇತರೆ ಖಾಯಿಲೆಗಳಿಂದ ಬಳಲುತ್ತಿದ್ದ ವ್ಯಕ್ತಿಗಳದಾಗಿದ್ದು, ಹಿರಿಯ​ ನಾಗರೀಕರಿಗೆ ಕೋವಿಡ್‌ನಿಂದ ಹೆಚ್ಚಿನ ಅಪಾಯವಿದ್ದು, ಮನೆಯಲ್ಲಿನ ಹಿರಿಯರ ಆರೋಗ್ಯದ ಜವಾಬ್ದಾರಿ​ ಪ್ರತಿಯೊಬ್ಬ ಕುಟುಂಬ ಸದಸ್ಯರ ಜವಾಬ್ದಾರಿಯಾಗಿದ್ದು, ಇದಕ್ಕಾಗಿ ರಾಜ್ಯದಲ್ಲೇ ಪ್ರಥಮ ಬಾರಿಗೆ ಜನಾಂದೋಲನ​ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.​ ​
ಜಿಲ್ಲಾ ಪಂಚಾಯತ್ ಸಿಇಓ ಡಾ.ನವೀನ್ ಭಟ್ ಮಾತನಾಡಿ, ಜಿಲ್ಲಾಡಳಿತದ ವತಿಯಿಂದ ಕೋವಿಡ್ ಸೋಂಕಿ ತರಿಗೆ​ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ, ಆದರೆ ರೋಗ ಹರಡದಂತೆ ತಡೆಯುವುದು ಪ್ರತಿಯೊಬ್ಬ ನಾಗರೀಕರಜವಾಬ್ದಾರಿಯಾಗಿದ್ದು, ಸರಿಯಾದ ಕ್ರಮದಲ್ಲಿ ಮಾಸ್ಕ್ ಅಳವಡಿಕೆ, ಸಾಮಾಜಿಕ ಅಂತರ ಪಾಲನೆಯನ್ನುಕಡ್ಡಾಯವಾಗಿ ಅನುಸರಿ​ ​ಸಬೇಕಿದ್ದು, ಕೋವಿಡ್ ಕೊನೆಗಾಣಿಸಲು ಸಾರ್ವಜನಿಕರ ಸಹಕಾರ ಅಗತ್ಯ ಎಂದರು.

ಅರೋಗ್ಯ ಇಲಾಖೆ ವತಿಯಿಂದ ಹೊರತಂದ ಕೋವಿಡ್ ೧೯ ಮಾಹಿತಿ ಕುರಿತ ಸ್ಟಿಕರ್‌ನ್ನು ಬಿಡುಗಡೆಗೊಳಿಸ ಲಾಯಿತು.​ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ, ನ್ಯಾ.ವಿವೇಕಾನಂದ ಎಸ್ ಪಂಡಿತ್, ನ್ಯಾ.ಲಾವಣ್ಯ, ನ್ಯಾ.ಭವಾನಿ,​ ನ್ಯಾ.ಶೋಭಾ, ನ್ಯಾ.ಮಂಜುನಾಥ್, ನ್ಯಾ.ಮಹಾಂತೇಶ್ ಬೂಸಗೋಳ, ನ್ಯಾ.ನಿರ್ಮಲಾ, ಪೋಕ್ಸೋ ನ್ಯಾಯಾಲಯದ​ ನ್ಯಾ. ಯಾದವ ವನಮಾಲಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡಾ,​ ಜಿಲ್ಲಾ ಕೋವಿಡ್ ನೋಡೆಲ್ ಅಧಿಕಾರಿ ಡಾ. ಪ್ರಶಾಂತ್ ಭಟ್, ಡಾ. ಪ್ರೇಮಾ ನಂದ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ​ ಪ್ರೇಮ್ ಸಾಗರ್, ವಕೀಲರ ಸಂಘದ ಅಧ್ಯಕ್ಷ ದಿವಾಕರ ಶೆಟ್ಟಿ, ಸರ್ಕಾರಿ ಅಭಿಯೋಜಕಿ ಶಾಂತಾ ಬಾಯಿ ಮತ್ತಿತರರು​ ಉಪಸ್ಥಿತರಿದ್ದರು.​​
- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

ರಾಜ್ಯೋತ್ಸವ ಪ್ರಶಸ್ತಿಯ ಅಂತಿಮ ಪಟ್ಟಿ ಅ.27ರಂದು ಪ್ರಕಟ

ಬೆಂಗಳೂರು: ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಸಾಧಕರಿಗೆ ನೀಡುವ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನವೆಂಬರ್ 1ರಂದು ನಡೆಸಲು ಸರ್ಕಾರ ತೀರ್ಮಾನಿಸಿದ್ದು, ಆಯ್ಕೆ ಪಟ್ಟಿ ಮಂಗಳವಾರ ಪ್ರಕಟವಾಗುವ ಸಾಧ್ಯತೆಗಳಿವೆ. ಒಟ್ಟುಈ ವರ್ಷ 65 ಜನರಿಗೆ ಪ್ರಶಸ್ತಿ...

ರಕ್ಷಿತಾ ನಾಯಕ್ ನಿಗೂಢ ಸಾವು,  ಪ್ರಶಾಂತ್  ಪತ್ತೆಗಾಗಿ  ಪೊಲೀಸರು ಶೋಧ

ಉಡುಪಿ: ಚಿಂತಾಜನಕ ಸ್ಥಿತಿಯಲ್ಲಿದ್ದ ಯುವತಿಯನ್ನು ಆಸ್ಪತ್ರೆಗೆ ಸೇರಿಸಿ,  ಪರಿಚಯವಿದ್ದ  ಯುವತಿ ಅಸ್ವಸ್ಥಳಾದ ಕೂಡಲೇ ಯುವಕ ಕೈ ಕೊಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ. ಯುವಕ ನಾಪತ್ತೆ ಯಾಗಿದ್ದಾನೆ. ದಾಖಲಾದ ಕೆಲವೇ ಹೊತ್ತಿನಲ್ಲಿ ಯುವತಿ  ರಕ್ಷಿತಾ...

ಎಸ್.ಎಲ್.ವಿ.ಟಿ ಯಲ್ಲಿ ವಿಶೇಷ ದೀಪಾರಾಧನೆ ಸೇವೆ   

ಉಡುಪಿ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನ ಶ್ರೀ ಶಾರದಾ ಮಾತೆ ಸನ್ನಿದಿಯಲ್ಲಿ ಶನಿವಾರ ರಾತ್ರಿ ವಿಸರ್ಜನಾ ಪೂಜಾ ವೇಳೆ  ಸಾವಿರಾರು ಹಣತೆ ದೀಪಗಳ ನ್ನು  ಬೆಳಗಿಸಿ ವಿಶೇಷ ದೀಪಾರಾಧನೆ ಸೇವೆಯನ್ನು ನೆರವೇರಿಸಲಾಯಿತು. ದೇವಳದ...

ಉಡುಪಿ ಸಾರ್ವಜನಿಕ ಶಾರದಾ ಸಮಿತಿಯ ಶಾರದಾ ದೇವಿಯ ಶೋಭಾಯಾತ್ರೆ  

ಉಡುಪಿ ಸಾರ್ವಜನಿಕ ಶಾರದಾ ಸಮಿತಿ ಹಮ್ಮಿಕೊಂಡ 5 ನೇ ವರ್ಷದ ಶಾರದಾ ದೇವಿಯ ಶೋಭಾಯಾತ್ರೆಗೆ ಅರ್ಚಕರಾದ  ಶಶಿಧರ್ ಭಟ್   ಶಾರದಾ ದೇವಿಗೆ ಆರತಿ  ಬೆಳಗಿಸಿ ಶೋಭಾಯಾತ್ರೆಗೆ ಚಾಲನೆ ನೀಡಿದರು. ಯಾತ್ರೆಯಲ್ಲಿ  ಮಹಿಳಾ  ಚಂಡೆ...

ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಚಂಡಿಕಾಯಾಗ ಸಂಪನ್ನ

ಇತಿಹಾಸ ಪ್ರಸಿದ್ಧ ಉಡುಪಿಯ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ  ಗೋವರ್ಧನ ತಂತ್ರಿಗಳ ತಂತ್ರಿತ್ವದಲ್ಲಿ ಹಾಗೂ ಪ್ರಕಾಶಾಚಾರ್ಯರ ಮಾರ್ಗದರ್ಶನದಲ್ಲಿ  ಪ್ರವೀಣ ಐತಾಳರ ಆಚಾರ್ಯತ್ವದಲ್ಲಿ ಲೋಕ ಕಲ್ಯಾಣಕ್ಕಾಗಿ ಸಮಸ್ತ ಭಕ್ತರ ಸಹಭಾಗಿತ್ವದಲ್ಲಿ ಶ್ರೀ ಚಂಡಿಕಾಯಾಗವು ಸಂಪನ್ನಗೊಂಡಿತು....
error: Content is protected !!