ಹೊಸ ರೂಪದ ಕೋವಿಡ್ ಭೀತಿ ಮಹಾರಾಷ್ಟ್ರದಲ್ಲಿ ನೈಟ್ ಕರ್ಫ್ಯೂ ಜಾರಿಗೆ

ಮುಂಬೈ: ಕೋವಿಡ್ ಗೆ ವ್ಯಾಕ್ಸಿನ್ ದೊರಕಲಿದೆ ಎಂದು ವಿಶ್ವವೇ ನಿಟ್ಟುಸಿರು ಬಿಡುವ ಸಂದರ್ಭದಲ್ಲಿ ಅದು ಮತ್ತೆ ಇನ್ನೊಂದು ರೂಪ ಪಡೆದಿದ್ದು ಜನರಲ್ಲಿ ಆತಂಕ ಮೂಡಿಸಿದೆ. ಈ ಹಿನ್ನೆಲೆ ಕೆಲವು ಕಡೆ ಮತ್ತೆ ನೈಟ್ ಕರ್ಫ್ಯೂ ಜಾರಿಯಾಗಲಿದೆ.

ಹೌದು, ಇಂಗ್ಲೆಂಡ್ ನಲ್ಲಿ ಹೊಸ ರೀತಿಯ ಕೋವಿಡ್ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಮಹಾರಾಷ್ಟ್ರ ಸರ್ಕಾರ ಮುಂದಿನ 15 ದಿನಗಳ ಕಾಲ ಪುರಸಭೆ ವ್ಯಾಪ್ತಿಯಲ್ಲಿ ರಾತ್ರಿ ಕರ್ಫ್ಯೂ ವಿಧಿಸಿ ಆದೇಶ ಹೊರಡಿಸಿದೆ. ಡಿಸೆಂಬರ್ 22ರಿಂದ ಜನವರಿ 5ರವರೆಗೆ ರಾತ್ರಿ 11 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿ ಇರಲಿದೆ.

ಯೂರೋಪಿಯನ್ ಮತ್ತು ಮಧ್ಯಪ್ರಾಚ್ಯ ರಾಷ್ಟ್ರಗಳಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರು 14 ದಿನಗಳು ಕಡ್ಡಾಯ ವಾಗಿ ಸಾಂಸ್ಥಿಕ ಕ್ವಾರೆಂಟೈನ್ ನಲ್ಲಿ ಇರಬೇಕು. ಅಲ್ಲದೆ ಅವರು ಐದು ಅಥವಾ ಏಳನೇ ದಿನ ಕೋವಿಡ್ RTPCR ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಮಹಾರಾಷ್ಟ್ರ ಸರ್ಕಾರ ತಿಳಿಸಿದೆ.

ಇನ್ನು ಕೋವಿಡ್ ಮಾರ್ಗಸೂಚಿಗಳನ್ನು ಯಾವುದೇ ಕಾರಣಕ್ಕೂ ಉಲ್ಲಂಘಿಸಬೇಡಿ. ಸಾರ್ವಜನಿಕ ಸ್ಥಳಗಳಲ್ಲಿ ಗುಂಪು ಗುಂಪಾಗಿ ಸೇರಬೇಡಿ. ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಿ, ವೈರಸ್​ನಿಂದ ರಕ್ಷಿಸಿಕೊಳ್ಳಿ ಎಂದು ಸಿಎಂ ಉದ್ಧವ್ ಠಾಕ್ರೆ ರಾಜ್ಯದ ಜನತೆಯಲ್ಲಿ ಮನವಿ ಮಾಡಿದ್ದಾರೆ.

 
 
 
 
 
 
 
 
 
 
 

Leave a Reply