ಭ್ರೂಣ ಲಿಂಗ ಪತ್ತೆ ಮಾಡವಲ್ಲಿ ಭಾಗಿಯಾದ ಎಲ್ಲರೂ ಶಿಕ್ಷೆಗೆ ಒಳಪಡುತ್ತಾರೆ -ನ್ಯಾ ಕಾವೇರಿ

ಉಡುಪಿ : ಭ್ರೂಣಲಿಂಗ ಪತ್ತೆ ಮಾಡುವುದು ಶಿಕ್ಷರ್ಹ ಅಪರಾಧವಾಗಿದ್ದು, ವೈದ್ಯರು ಅಪರಾಧ ಮಾಡುವುದನ್ನು ಮುಂದುವರಿಸಿದಲ್ಲಿ ಶಾಶ್ವತವಾಗಿ ವೈದ್ಯಕೀಯ ಮಂಡಳಿಯಿಂದ ಹೆಸರು ತೆಗೆದುಹಾಕಲಾಗುವುದು. ಮಹಿಳೆ, ಆಕೆಯ ಪತಿ, ಅವರ ಸಂಬಧಿಕರು ಭ್ರೂಣಲಿಂಗ ಪತ್ತೆಗೆ ಒತ್ತಾಯಿಸಿದ್ದಲ್ಲಿ ಅವರೂ ಶಿಕ್ಷಗೆ ಒಳಪಡುತ್ತಾರೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ ಹೇಳಿದರು.

 ಬುಧವಾರ ನಡೆದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯ ಶ್ರೀ ಕೃಷ್ಣ ಸಭಾಂಗಣದಲ್ಲಿ, ಜಿಲ್ಲಾ ಆಡಳಿತ ಉಡುಪಿ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ಸಕ್ಷಮ ಪ್ರಾಧಿಕಾರ ಪಿ.ಸಿ ಮತ್ತು ಪಿ.ಎನ್.ಡಿ.ಟಿ ಉಡುಪಿ ಹಾಗೂ ಉಡುಪಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ, ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಕಾಯ್ದೆ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವೈದ್ಯರು ಭ್ರೂಣ ಲಿಂಗ ಪತ್ತೆ ಮಾಡಿದ್ದಲ್ಲಿ ಅಂತವರಿಗೆ ಮೊದಲ ಅಪರಾಧಕ್ಕೆ 3 ವರ್ಷ ಜೈಲು ಶಿಕ್ಷೆ ಹಾಗೂ 10,000 ರೂ. ಗಳವರೆಗೆ ದಂಡ ಹಾಗೂ ಇದೇ ಅಪರಾಧ ಮತ್ತೊಮ್ಮೆ ಮಾಡಿದ್ದಲ್ಲಿ 5 ವರ್ಷಗಳ ವರೆಗೆ ಜೈಲು ಶಿಕ್ಷೆ ಜೊತೆಗೆ ರೂ.50,000 ದಂಡ ವಿಧಿಸಲಾಗುತ್ತದೆ ಎಂದರು.

ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ರೀರಾಮ್ ರಾಆದರೂ ಕೂಡ ಉಡುಪಿ ಯಂತಹ ಬುದ್ಧಿವಂತರ ಜಿಲ್ಲೆಯಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕಡಿಮೆ ಯಾಗುತ್ತಿದೆ. ಯಾವುದೇ ಸಂಸ್ಥೆಯವರು ಭ್ರೂಣ ಲಿಂಗ ಪತ್ತೆ ಮಾಡುವುದು ಕಂಡು ಬಂದಲ್ಲಿ ಅಥವಾ ಭ್ರೂಣ ಲಿಂಗ ಪತ್ತೆ ಮಾಡುವುದು ಸಾರ್ವಜನಿಕರ ಗಮನಕ್ಕೆ ಬಂದಲ್ಲಿ, ಅದರ ಸಾಕ್ಷಾಧಾರಗಳು ಇದ್ದು ದೂರು ನೀಡಿದರೆ ಅಂತವರಿಗೆ 5,00,000 ಬಹುಮಾನ ನೀಡಲಾಗುವುದು ಹಾಗೂ ಇಂತಹ ದೂರು ಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೂ ನೀಡುವಂತೆ ತಿಳಿಸಿದರು.

ಭ್ರೂಣಲಿಂಗ ಪತ್ತೆಯ ಬಗ್ಗೆ ದೂರುಗಳಿದ್ದರೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಬೇಕು. ಸಾರ್ವಜನಿಕರು ನಕಲು ವೈದ್ಯರುಗಳನ್ನು ನಂಬಿ ಯಾವುದೇ ಆಮಿಷಗಳಿಗೆ ಒಳಗಾಗಬೇಡಿ ಎಂದರು. ಗಂಡು ಹೆಣ್ಣು ಎಂಬ ತಾರತಮ್ಯ ಮಾಡದೇ ಮಗುವನ್ನುಸಹಜವಾಗಿ ದೈಹಿಕವಾಗಿ ಸರಿಯಿದ್ದರೆ ಸಾಕು ಎಂದು ಭಾವಿಸಬೇಕು. ಗಂಡು ಹೆಣ್ಣು ಎಂಬ ಭೇದ-ಬಾವ ಮಾಡದ ಇಬ್ಬರಿಗೂ ಶಿಕ್ಷಣವನ್ನು ನೀಡಬೇಕು ಎಂದರು.

 

 ಅಡ್ವೈಸರಿ ಬೋರ್ಡ್ ಛೇರ್ಮನ್ ಡಾ.ಪ್ರತಾಪ್ ಮಣಿಪಾಲ,  ಶಿಶು ಅಭಿವೃದ್ಧಿ ಅಧಿಕಾರಿ ವೀಣಾ ವಿವೇಕಾನಂದ, ಆಶಾ ಕಾರ್ಯಕರ್ತೆಯರು, ಮೆಂಟರ್‌ಗಳು ಹಾಗೂ ಮತ್ತಿತರರು ಉಪಸ್ಥಿತರಿದ್ಧರು. ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್ ನಿರೂಪಿಸಿ, ವಂದಿಸಿದರು.

 
 
 
 
 
 
 
 
 
 
 

Leave a Reply