ಉಡುಪಿಯ ತಾಯಿ ಮತ್ತು ಮಕ್ಕಳ ಉಚಿತ ಆಸ್ಪತ್ರೆಯನ್ನು ಇನ್ನುಮುಂದೆ ಸರ್ಕಾರವೇ ಮುನ್ನಡೆಸಲಿದೆ – ಸಚಿವ ಡಾ.ಸುಧಾಕರ್

ಉಡುಪಿ: ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಉಚಿತ ಆಸ್ಪತ್ರೆಯನ್ನು ಸರ್ಕಾರವೇ ಮುನ್ನಡೆಸುತ್ತದೆ. ಕೆಲ ಪತ್ರ ವ್ಯವಹಾರಗಳು ನಡೆದ ಮೇಲೆ ಎಲ್ಲಾ ಖರ್ಚು ವೆಚ್ಚವನ್ನು ಸರಕಾರವೇ ಭರಿಸಲಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.

ಆಸ್ಪತ್ರೆಯನ್ನು ಮುನ್ನಡೆಸುವ ಸಮಸ್ಯೆಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಡಾ. ಸುಧಾಕರ್ ಅವರ ನೇತೃತ್ವದಲ್ಲಿ ಅಧಿಕಾರಿಗಳೊಂದಿಗೆ ಬೆಂಗಳೂರಿನಲ್ಲಿ ಸಭೆ ನಡೆಸಿ ಮುಂದಿನ ಕಾರ್ಯ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು.ಉಚಿತ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲ ಎಂದು ಕೆಲ ತಿಂಗಳಿನಿಂದ ಆರೋಪ ಕೇಳಿಬರುತ್ತಿದೆ. ಈ ಹಿನ್ನಲೆಯಲ್ಲಿ ವೈದ್ಯರು ಸಿಬ್ಬಂದಿಗಳು ಆಗಾಗ ತಮ್ಮ ಪ್ರತಿಭಟನೆಯನ್ನು ಹಾಕುತ್ತಿದ್ದರು. ರೋಗಿಗಳಿಗೆ ಯಾವುದೇ ಸೇವೆಗಳನ್ನು ನೀಡಲು ನಿರಂತರ ಪ್ರತಿಭಟನೆ ಮಾಡುವ ಎಚ್ಚರಿಕೆಯನ್ನು ನೀಡಿದ್ದರು.

ಉಡುಪಿ ಮೂಲದ ದುಬೈ ಉದ್ಯಮಿ ಬಿಆರ್ ಶೆಟ್ಟಿ ತಂದೆ ತಾಯಿಯ ಹೆಸರಿನಲ್ಲಿ ಆಸ್ಪತ್ರೆಯನ್ನು ಉಡುಪಿಯಲ್ಲಿ ಕಟ್ಟಿಸಿ ಸಾರ್ವಜನಿಕರಿಗೆ ಉಚಿತ ಚಿಕಿತ್ಸೆಯನ್ನು ನೀಡುತ್ತಿದ್ದರು. ಆರ್ಥಿಕ ಸಮಸ್ಯೆಗೆ ಸಿಲುಕಿದ ನಂತರ ಬಿಆರ್ ಶೆಟ್ಟಿ ಆಸ್ಪತ್ರೆಯನ್ನು ಸರಕಾರವೇ ಸುಪರ್ದಿಗೆ ತೆಗೆದುಕೊಂಡು ಮುಂದುವರೆಸುವಂತೆ ಕೋರಿದ್ದರು. ಈ ಬಗ್ಗೆ ಸಭೆ ನಡೆಸಿ ಕೆಲ ಪತ್ರವ್ಯವಹಾರಗಳು ಮುಗಿದನಂತರ ರಾಜ್ಯಸರ್ಕಾರವೇ ಆಸ್ಪತ್ರೆಯನ್ನು ಸುಪರ್ದಿಗೆ ತೆಗೆದುಕೊಳ್ಳಲು ತೀರ್ಮಾನಿಸಲಾಯಿತು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಆಯುಕ್ತ ಕೆ. ವಿ. ತ್ರಿಲೋಕ್ ಚಂದ್ರ, ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಾಗಭೂಷಣ್ ಉಡುಪ, ಜಿಲ್ಲಾ ಶಸ್ತ್ರಚಿಕಿತ್ಸಕ ಮಧುಸೂದನ್ ನಾಯಕ್ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply