ಗ್ರಹ ಸಚಿವರಿಗೂ ಕಾಡಿದ ಕೊರೋನಾ 

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿದ್ದು, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಕೊರೋನಾ ಸೋಂಕು ದೃಢ ಪಟ್ಟಿದ್ದು, ವೈದ್ಯರ ಸಲಹೆಯ ಮೇರೆಗೆ ಮನೆಯಲ್ಲಿಯೇ ಐಸೊಲೇಷನ್‌ನಲ್ಲಿದ್ದಾರೆ.

ಈ ಬಗ್ಗೆ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದು, ನಮ್ಮ ಮನೆಯಲ್ಲಿ ಕಾರ್ಯನಿರ್ವಹಿಸುವ ಕೆಲಸದ ಹುಡುಗನಿಗೆ ನಿನ್ನೆ ಕೋವಿಡ್-19 ಪರೀಕ್ಷೆಯಲ್ಲಿ ಸೊಂಕು ದೃಢಪಟ್ಟಿರುತ್ತದೆ. ಈ ಹಿನ್ನೆಲೆಯಲ್ಲಿ ನಾನು ಸಹ ಪರೀಕ್ಷೆಗೆ ಒಳಪಟ್ಟಿದ್ದು ನನಗೂ ಸಹ ಸೊಂಕು ದೃಢಪಟ್ಟಿದ್ದು, ಯಾವುದೇ ರೀತಿಯ ರೋಗ ಲಕ್ಷಣಗಳು ಇರುವುದಿಲ್ಲ ಹಾಗೂ ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ ಎಂದಿದ್ದಾರೆ.

 
 
 
 
 
 
 
 
 

Leave a Reply