ಸೋಂಕಿತರು ಸತ್ತಾಗ ಬಾಕಿ ಬಿಲ್ ಪಾವತಿಸಲು ಆಸ್ಪತ್ರೆ ಒತ್ತಾಯಿಸುವಂತಿಲ್ಲ

ಬೆಂಗಳೂರು: ಕೊರೊನಾ ಸೋಂಕಿತರು ಮೃತಪಟ್ಟರೆ ಆಸ್ಪತ್ರೆಯವರು ಬಾಕಿಯಿರುವ ಬಿಲ್ ಪಾವತಿಸಲು ಒತ್ತಾಯಿಸುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶಿಸಿದೆ.

ರಾಜ್ಯದಲ್ಲಿ ಅನೇಕ ಖಾಸಗಿ ಆಸ್ಪತ್ರೆಗಳು ಕೋವಿಡ್ 19 ಸೋಂಕಿತರು ಮೃತಪಟ್ಟು , ಆಸ್ಪತ್ರೆಯ ಹಾಗೂ ಚಿಕಿತ್ಸೆಯ ಬಾಕಿ ಬಿಲ್ ಪಾವತಿಸಿದ ನಂತರವೇ ಶವವನ್ನು ಸಂಬಂಧಿಕರಿಗೆ ನೀಡುವಂತೆ ಷರತ್ತು ವಿಧಿಸುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ. ಇದನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ಈ ಬಗ್ಗೆ ಆದೇಶ ನೀಡಿದೆ.

ಕರ್ನಾಟಕ ಪ್ರೈವೇಟ್ ಮೆಡಿಕಲ್‌ ಎಸ್ಟಾಬ್ಲಿಷ್‌ಮೆಂಟ್ ಆಕ್ಟ್( ಕೆಪಿಎಂಇ ),2007 ಭಾಗ 11 ( 1 ) ಉಪ ಷರತ್ತು ( vi ) ರ ಅನ್ವಯ , ಮೃತ ವ್ಯಕ್ತಿಯ ದೇಹವನ್ನು ಹಸ್ತಾಂತರಿಸುವ ವೇಳೆ ಆಸ್ಪತ್ರೆಯ ಬಾಕಿ ಬಿಲ್ ಪಾವತಿಗೆ ಒತ್ತಾಯಿಸಿ ಒತ್ತಡ ಹೇರುವಂತಿಲ್ಲ ಎಂದು ತಿಳಿಸಲಾಗಿದೆ.

 
 
 
 
 
 
 
 
 
 
 

Leave a Reply