Janardhan Kodavoor/ Team KaravaliXpress
27.6 C
Udupi
Wednesday, August 17, 2022
Sathyanatha Stores Brahmavara

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ದ್ರವರೂಪದ ಆಮ್ಲಜನಕ ಸ್ಥಾವರ ಉದ್ಘಾಟಿಸಿದ ಸಚಿವ ಬೊಮ್ಮಾಯಿ

ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆ ಆವರಣದಲ್ಲಿ ನೂತನವಾಗಿ ಸ್ಥಾಪಿಸಲಾದ ದ್ರವರೂಪದ ಆಮ್ಲಜನಕದ ಸ್ಥಾವರ (ಲಿಕ್ವಿಡ್ ಆಕ್ಸಿಜನ್ ಪ್ಲಾಂಟ್)ನ ಉದ್ಘಾಟನೆಯನ್ನು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರು ಗುರುವಾರ ನೆರವೇರಿಸಿದರು.50ಲಕ್ಷ ರೂ. ವೆಚ್ಚದಲ್ಲಿ ಆರೋಗ್ಯ ಇಲಾಖೆಯಿಂದ ನಿರ್ಮಾಣವಾಗಿರುವ ಈ ದ್ರವ ರೂಪದ ಆಮ್ಲಜನಕ ಸ್ಥಾವರವು 6ಸಾವಿರ ಲೀಟರ್ ಸಾಮರ್ಥ್ಯವನ್ನು ಹೊಂದಿದೆ. ಈಗಾಗಲೇ ಕಾರ್ಯಾಚರಿಸುತ್ತಿದ್ದ ಈ ಘಟಕಕ್ಕೆ ಬಳ್ಳಾರಿಯ ಖಾಸಗಿ ಸಂಸ್ಥೆಯಿಂದ ದ್ರವ ರೂಪದ ಆಮ್ಲಜನಕವನ್ನು ತಂದು ತುಂಬಿಸಲಾಗುತ್ತದೆ. ಉಡುಪಿ ಜಿಲ್ಲೆಯಲ್ಲಿ ಕೋವಿಡ್ ರೋಗಿಗಳಿಗೆ ಆಮ್ಲಜನಕದ ಆವಶ್ಯಕತೆ ಇದ್ದಾಗ ಈ ಘಟಕದಿಂದಲೇ ಪೂರೈಸಲಾಗಿದ್ದು, ಹಾಗೆ ಜಿಲ್ಲೆಯಲ್ಲಿ ಕೋವಿಡ್ ಮರಣ ಪ್ರಮಾಣವನ್ನು ಕಡಿಮೆಗೊಳಿಸಲು ಈ ಘಟಕ ಸಹಾಯ ಮಾಡಿದೆ.

ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಸ್ಥಳೀಯ ನಗರಸಭಾ ಸದಸ್ಯೆ ರಶ್ಮಿ ಚಿತ್ತರಂಜನ್ ಭಟ್ ಮತ್ತು ಜಿಲ್ಲಾಧಿಕಾರಿ ಜಿ. ಜಗದೀಶ, ಡಿಎಚ್‌ಒ ಡಾ. ಸುಧೀರ್‌ಚಂದ್ರ ಸೂಡ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಮಧುಸೂದನ್ ನಾಯಕ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!