Janardhan Kodavoor/ Team KaravaliXpress
30.6 C
Udupi
Tuesday, August 16, 2022
Sathyanatha Stores Brahmavara

ಕಳೆದ 24 ಗಂಟೆಯಲ್ಲಿ ದೇಶದಲ್ಲಿ 90,928 ಕೋವಿಡ್ ಕೇಸ್ ಪತ್ತೆ

ನವದೆಹಲಿ: ಕೊರೊನಾ ಸೊಂಕು ಮತ್ತೆ ತನ್ನ ಅಟ್ಟಹಾಸ ಆರಂಭಿಸಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 90 ಸಾವಿರದ 928 ಹೊಸ ಕೇಸುಗಳು ವರದಿಯಾಗಿದ್ದು 325 ಮಂದಿ ಮೃತಪಟ್ಟಿದ್ದಾರೆ.

ಹೊಸ ವರ್ಷದ ಬಳಿಕ ದೇಶದಲ್ಲಿ ಕೋವಿಡ್ ಕೇಸ್ ಗಳ ಸಂಖ್ಯೆ ಕಂಡರಿಯದ ರೀತಿಯಲ್ಲಿ ಹೆಚ್ಚುತ್ತಿವೆ. ಸದ್ಯ ಒಟ್ಟು ಸಕ್ರಿಯ ಕೋವಿಡ್ ಸೋಂಕಿತರ ಸಂಖ್ಯೆ 2,85,401ಕ್ಕೆ ಏರಿಕೆಯಾಗಿದೆ. ಕಳೆದ 24,19,206 ಮಂದಿ ಗುಣಮುಖರಾಗುವುದರೊಂದಿಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 3,43,41,009ಕ್ಕೆ ತಲುಪಿದೆ.

ದೇಶದಲ್ಲಿ ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 4,82, 876ಕ್ಕೆ ಏರಿಕೆಯಾಗಿದೆ. ಗುಣಮುಖ ಹೊಂದುತ್ತಿರುವವರ ಪ್ರಮಾಣ ಶೇಕಡಾ 97.81ರಷ್ಟಾಗಿದೆ. ಈವರೆಗೂ 68.53 ಕೋಟಿ ಜನರನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದೆ.

ಕರ್ನಾಟಕದಲ್ಲಿ 226 ಹೊಸ ಒಮಿಕ್ರಾನ್ ಸೋಂಕಿತರು ಕಳೆದ 24 ಗಂಟೆಗಳಲ್ಲಿ ಪತ್ತೆಯಾಗಿದ್ದು, 25 ಮಂದಿ ಗುಣಮುಖರಾಗಿದ್ದಾರೆ. ಮಹಾರಷ್ಟ್ರದಲ್ಲಿ ಅತಿಹೆಚ್ಚು 797 ಪ್ರಕರಣ ವರದಿಯಾಗಿದ್ದು, ನಂತರದ ಸ್ಥಾನದಲ್ಲಿ ದೆಹಲಿ 465 ಕೇಸುಗಳು ವರದಿಯಾಗಿವೆ. ಒಟ್ಟಾರೆ ದೇಶದಲ್ಲಿ 2,630 ಸೋಂಕಿತರಿದ್ದಾರೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!