ಉಡುಪಿ: ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ಅವರಿಗೆ ಗುರುವಾರ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಈ ಬಗ್ಗೆ ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ನನ್ನ ಆಪ್ತ ಕಾರ್ಯದರ್ಶಿಯೋರ್ವರಿಗೆ ಕೋವಿಡ್ 19 ಪಾಸಿಟಿವ್ ಬಂದ ಹಿನ್ನಲೆ ಕಳೆದ 7 ದಿನಗಳಿಂದ ಹೋಂ ಕಾರಂಟೈನ್ ನಲ್ಲಿದ್ದು ಮುಂಜಾಗೃತಾ ಕ್ರಮವಾಗಿ ನಾನು ಪರೀಕ್ಷೆ ಮಾಡಿಸಿದಾಗ ಕೋವಿಡ್ 19 ಸೋಂಕು ದೃಢಪಟ್ಟಿದ್ದು ಯಾವುದೇ ಸೋಂಕಿನ ಲಕ್ಷಣಗಳು ಇಲ್ಲದಿರುವುದರಿಂದ ಕೋವಿಡ್ ಕೇರ್ ಸೆಂಟರ್ ನಲ್ಲಿ ಶೂಶ್ರುಷೆ ಪಡೆಯುತ್ತಿದ್ದೇನೆ. ಅಗತ್ಯ ಕಾರ್ಯಗಳಿಗೆ ಕಚೇರಿಯನ್ನು ಸಂಪರ್ಕಿಸಿ ಎಂದು ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ
KaravaliXpress.com - ವಿಶ್ವಾಸದ ನಡೆ
ಬದಲಾವಣೆ ಜಗದ ನಿಯಮ. ಅದಕ್ಕೆ ಮಾಧ್ಯಮ ಲೋಕವೂ ಹೊರತಲ್ಲ.
ಪತ್ರಿಕಾರಂಗದಲ್ಲಿ ಸುಮಾರು ಎರಡು ದಶಕಗಳ ಅನುಭವ, ಸಹೃದಯರ ಒಡನಾಟದ ಅನುಭವಾಮೃತದಿಂದ ಮೊಳಕೆಯೊಡೆದಿದೆ ಈ ವೆಬ್ ಸುದ್ದಿಜಾಲ.