ಉಡುಪಿಯಲ್ಲಿ ಜೂನ್ 17 ರ ಲಸಿಕಾ ಲಭ್ಯತೆ ವಿವರ

Coronavirus COVID-19 single dose small vials and multi dose in scientist hands concept. Research for new novel corona virus immunization drug.

ಜಿಲ್ಲೆಯಲ್ಲಿ ಜೂನ್ 17 ರಂದು ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಸಿಕೆ ಹಾಗೂ ಉಡುಪಿ ನಗರ ಪ್ರದೇಶದಲ್ಲಿ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೋವಿಶೀಲ್ಡ್ ಲಸಿಕೆ ಲಭ್ಯವಿರುವುದಿಲ್ಲ. ನಗರದ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ, ಜೂನ್ 25 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ (100 ಡೋಸ್) ಲಭ್ಯವಿದೆ.

ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳಿಗೆ ಮಣಿಪಾಲದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ (ಮಾಧವ ಕೃಪಾ ಶಾಲೆ) 190 ಡೋಸ್ ಲಸಿಕೆ ಲಭ್ಯವಿದೆ.

ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು ಮತ್ತು 45 ವರ್ಷ ಮೇಲ್ಪಟ್ಟ ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರಿಗೆ ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ ಮತ್ತು ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 84 ದಿನಗಳು ಮೀರಿದವರು 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಹಾಗೂ ಪ್ರಥಮ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 4 ವಾರ (28 ದಿನ) ಮೀರಿದವರು ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಜೂನ್ 17 ರಂದು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 

Leave a Reply