ಜೂನ್ 25 ರಂದು ಉಡುಪಿಯಲ್ಲಿ ಲಸಿಕಾ ಲಭ್ಯತೆ ವಿವರ

ಜಿಲ್ಲೆಯಲ್ಲಿ ಜೂನ್ 25 ರಂದು ಉಡುಪಿ ನಗರ ಪ್ರದೇಶದಲ್ಲಿ ಕೊರೋನ ಮುಂಚೂಣಿ ಕಾರ್ಯಕರ್ತರು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೋವಿಡ್-19 ಲಸಿಕೆ ಲಭ್ಯವಿರುವುದಿಲ್ಲ. ನಗರ ಪ್ರದೇಶದ ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆಯಲ್ಲಿ ಬೆಳಗ್ಗೆ 9.30 ರಿಂದ ಸಂಜೆ 4.30 ರ ವರೆಗೆ ಜುಲೈ 5 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ ಮಾತ್ರ 2ನೇ ಡೋಸ್ ಕೋವಿಶೀಲ್ಡ್ -150 ಡೋಸ್ ಲಸಿಕೆ ಲಭ್ಯವಿರುತ್ತದೆ.

ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯ ಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆದ್ಯತಾಗುಂಪಿನವರು, ಆರೋಗ್ಯ ಕಾರ್ಯಕರ್ತರು, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರು ಕೋವಿಡ್-19 ಪ್ರಥಮ ಡೋಸ್ ಮತ್ತು 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕೆ ಪಡೆಯಬಹುದು.

ಜಿಲ್ಲೆಯಲ್ಲಿ 18 ರಿಂದ 44 ವರ್ಷ ವಯೋಮಿತಿಯ ಸಾರ್ವಜನಿಕರಿಗೆ ಯಾವುದೇ ಕೋವಿಡ್-19 ಲಸಿಕೆ ಲಭ್ಯವಿರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 

Leave a Reply