ಜುಲೈ 3, (ಶನಿವಾರ) ರಂದು ಕೋವಿಡ್‌ ಲಸಿಕಾ ಲಭ್ಯತೆ ಮಾಹಿತಿ

ಉಡುಪಿ: ಕೊರೋನ ಮುಂಚೂಣಿ ಕಾರ್ಯಕರ್ತರು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕ ರಿಗೆ 2ನೇ ಡೋಸ್ ಕೋವಿಡ್-19 ಲಸಿಕೆ ಲಭ್ಯ
ದಿನಾಂಕ 03/07/2021 ರಂದು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೊರೋನ ಮುಂಚೂಣಿ ಕಾರ್ಯಕರ್ತರು/ ದುರ್ಬಲ ಗುಂಪಿನ ಫಲಾನುಭವಿಗಳು/ಆದ್ಯತಾ ಗುಂಪಿನವರು ಮತ್ತು ಆರೋಗ್ಯ ಕಾರ್ಯಕರ್ತರು/ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರುಗಳಿಗೆ ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೋವಿಡ್-19 2ನೇ ಡೋಸ್ ಲಸಿಕೆ ಲಭ್ಯವಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ನಾಗಭೂಷಣ್‌ ಉಡುಪ ತಿಳಿಸಿದ್ದಾರೆ.
ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿ (ಸೇಂಟ್ ಸಿಸಿಲಿ ಶಾಲೆ) 2ನೇ ಡೋಸ್ ಕೋವಿಶೀಲ್ಡ್ – (200 ಡೋಸ್ ಲಭ್ಯ) 
* ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲ (ಮಾಧವ ಕೃಪಾ ಶಾಲೆ, ಮಣಿಪಾಲ) * 2ನೇ ಡೋಸ್ ಕೋವಿಶೀಲ್ಡ್ – (300 ಡೋಸ್ ಲಸಿಕೆ) 2) ಕೋವ್ಯಾಕ್ಸಿನ್ 2ನೇ ಡೋಸ್ -(150 ಡೋಸ್‍ಲಭ್ಯ) *ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಉಡುಪಿ (ಖಾಸಗಿ ಪ್ರಾಥಮಿಕ ಶಾಲೆ ಆದಿಉಡುಪಿಯಲ್ಲಿ) 2ನೇ ಡೋಸ್ ಕೋವಿಶೀಲ್ಡ್ – (150 ಡೋಸ್ ಲಭ್ಯ) *ಎಫ್.ಪಿ. ಎ.ಐ ಕುಕ್ಕಿಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾ ನಗರ)
2ನೇ ಡೋಸ್ ಕೋವಿಶೀಲ್ಡ್ – (150 ಡೋಸ್‍ಲಭ್ಯ) *ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿ ದಿನಾಂಕ 07/07/2021 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ (150 ಡೋಸ್ ಲಭ್ಯ.)
*ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ದುರ್ಬಲ ಗುಂಪಿನ ಫಲಾನುಭವಿಗಳು/ಆರೋಗ್ಯ ಕಾರ್ಯಕರ್ತರು/ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರು ಕೋವಿಡ್-19 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ದಿನಾಂಕ 03..07.2021 ರಂದು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು.
*ಜಿಲ್ಲೆಯಲ್ಲಿ 18 ರಿಂದ 44 ವರ್ಷ ವಯೋಮಿತಿಯ ಸಾರ್ವಜನಿಕರಿಗೆ ಯಾವುದೇ ಕೋವಿಡ್- 19  ಲಸಿಕೆ ಲಭ್ಯವಿರುವುದಿಲ್ಲ. *4) ಜಿಲ್ಲೆಯಲ್ಲಿ 45 ವರ್ಷ ಮೇಲ್ಪಟ್ಟ ವಯೋಮಿತಿಯ ಸಾರ್ವ ಜನಿಕರಿಗೆ ಪ್ರಥಮ ಡೋಸ್ ಕೋವಿಡ್-19 ಲಸಿಕೆ ಲಭ್ಯವಿರುವುದಿಲ್ಲ.
 
 
 
 
 
 
 
 
 
 
 

Leave a Reply