ಜುಲಾಯಿ 27, ಮಂಗಳವಾರದ ಲಸಿಕೆ ಲಭ್ಯತೆಯ ವಿವರ

ಉಡುಪಿ ಜುಲೈ 26: ಜಿಲ್ಲೆಯಲ್ಲಿ ಜು. 27 ರಂದು ನಗರ ಪ್ರದೇಶದ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆದ್ಯತಾ ಗುಂಪಿನವರು, ಆರೋಗ್ಯ ಕಾರ್ಯಕರ್ತರ, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರುಗಳಿಗೆ, 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಹಾಗೂ ವಿಕಲಚೇತನರಿಗೆ ಮತ್ತು ಅವರ ಆರೈಕೆದಾರರಿಗೆ ಕೋವಿಡ್-19 2 ನೇ ಡೋಸ್ ಲಸಿಕೆ ಲಭ್ಯವಿರುತ್ತದೆ.

ಅಜ್ಜರಕಾಡು ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರದಲ್ಲಿ 2 ನೇ ಡೋಸ್ ಕೋವಿಶೀಲ್ಡ್ 150 ಡೋಸ್ ಲಸಿಕೆ ಮತ್ತು ನಗರದ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಆಗಸ್ಟ್ 3 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2 ನೇ ಡೋಸ್ ಕೋವಿಶೀಲ್ಡ್ 100 ಡೋಸ್ ಲಸಿಕೆ ಲಭ್ಯವಿರುತ್ತದೆ.

ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು,ಆರೋಗ್ಯ ಕಾರ್ಯಕರ್ತರು, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು, 45 ವರ್ಷ ಮೇಲ್ಪಟ್ಟ ಸಾರ್ವಜನಿಕರು, ವಿಕಲಚೇತನರು ಮತ್ತು ಅವರ ಆರೈಕೆದಾರರು ಕೋವಿಡ್-19 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕೆ ಲಭ್ಯವಿದ್ದಲ್ಲಿ ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply