Janardhan Kodavoor/ Team KaravaliXpress
26 C
Udupi
Monday, May 17, 2021

ದೇಶಾದ್ಯಂತ ಲಾಕ್‌ಡೌನ್ ಮಾಡಿ‌:ಕೇಂದ್ರ ಸರಕಾರಕ್ಕೆ ಸುಪ್ರೀಂ ಸೂಚನೆ

ನವದೆಹಲಿ : ಕೊರೊನಾ‌ ವೈರಸ್ ಸೋಂಕಿನ ಆರ್ಭಟ ದೇಶ​ವೇ ನಡುಗುವಂತೆ ಮಾಡಿದೆ. ಸೋಂಕು ಹರಡುವಿಕೆಯನ್ನು ಕಡಿಮೆ ಮಾಡುವ​ಲ್ಲಿ ಇಡೀ ದೇಶವನ್ನೇ ಲಾಕ್ ಡೌನ್ ಮಾಡಿ‌ ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರಕಾರಕ್ಕೆ ಸೂಚನೆಯನ್ನು ನೀಡಿದೆ.
​​
ಸೂಪರ್ ಸ್ಪ್ರೆಡ್ಡರ್‌ ಕಾರ್ಯಕ್ರಮಗಳಿಗೆ ನಿಷೇಧ ಹೇರಬೇಕು. ಈ ಮೂಲಕ ಜನರು ಗುಂಪು ಸೇರು ವುದನ್ನು ತಡೆಯಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಾರ್ವಜನಿಕ ಕಲ್ಯಾಣದ ದೃಷ್ಟಿ ಯಿಂದ ಲಾಕ್‌ಡೌನ್‌ ಜಾರಿಯ ಕುರಿತು ಪರಿಶೀಲನೆಯನ್ನು ನಡೆಸಬೇಕು.

ಲಾಕ್‌ಡೌನ್‌ನಿಂದ ಬಡವರಿಗೆ ಕಷ್ಟವಾಗುವುದರಿಂದ ಲಾಕ್‌ಡೌನ್‌ ಜಾರಿಗೂ ಮುನ್ನ ಆ ಸಮುದಾಯಗಳ ಬಗ್ಗೆ ಕಾಳಜಿ ತೆಗೆದುಕೊಂಡು ನಿರ್ಧಾರ ಕೈಗೊಳ್ಳಬೇಕು ಎಂದು ಆಭಿಪ್ರಾಯ ಪಟ್ಟಿದೆ.

ಕೊರೊನಾ ಸೋಂಕನ್ನು ಹತ್ತಿಕ್ಕುವ ಸಲುವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈವರೆಗೆ ಕೈಗೊಂಡಿರುವ ಕ್ರಮಗಳು ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳುವ ಯೋಜನೆಯ ಬಗ್ಗೆ ವಿವರಗಳನ್ನು ನೀಡುವಂತೆ ಸುಪ್ರೀಂ ಕೋರ್ಟ್ ಸೂಚನೆಯನ್ನು ನೀಡಿದೆ.​ 

ಅಮೇರಿಕಾ ಕೂಡ ಕೆಲವು ವಾರಗಳ ಕಾಲ ಭಾರತವನ್ನು ಲಾಕ್ ಡೌನ್ ಮಾಡುವ ಸಲಹೆಯನ್ನು ನೀಡಿತ್ತು.‌ ಇದೀಗ ಸುಪ್ರೀಂ ಕೋರ್ಟ್ ಕೂಡ ಲಾಕ್ ಡೌನ್ ಸಲಹೆಯನ್ನು ನೀಡಿದೆ.

ದೇಶದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಲಾಕ್ ಡೌನ್ ಬಹುತೇಕ ಖಚಿತ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

ಪೆರಂಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯುತ್ತಿದೆ ಪ್ರಗತಿಕಾರ್ಯ

ಉಡುಪಿ: ಜಿಲ್ಲೆಯ ಶಿವಳ್ಳಿ ಗ್ರಾಮದ ಪೆರಂಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಕೆಲವು ನವೀಕರಣ ಕಾರ್ಯಗಳನ್ನು ಕೈಗೆತ್ತಿಕೊಂಡಿದ್ದು ಮೊದಲ ಹಂತದಲ್ಲಿ ಶ್ರೀ ಮಹಾಗಣಪತಿಯ ಗುಡಿ ತೀರ್ಥಮಂಟಪಗಳನ್ನು ನೂತನವಾಗಿ ನಿರ್ಮಿಸಲಾಗುತ್ತಿದೆ .‌ ಸೀಮಿತ ಅವಧಿಯೊಳಗೆ ಕಾರ್ಯಗಳನ್ನು...

​ಕಾಪು ಸಮುದ್ರ ಮಧ್ಯೆ ಸಿಲುಕಿಕೊಂಡಿರುವ 9 ಕಾರ್ಮಿಕರ ರಕ್ಷಣೆಗೆ ಪ್ರಧಾನಿ, ರಕ್ಷಣಾ ಸಚಿವರಿಗೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮನವಿ

ಭಾರತ ಸರಕಾರದ ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್ ಮತ್ತು ಗೌರವಾನ್ವಿತ ಪ್ರಧಾನಮಂತ್ರಿಯವರಾದ ಶ್ರೀ ನರೇಂದ್ರ ಮೋದಿಯವರೇ, ಉಡುಪಿ ಜಿಲ್ಲೆಯ ಕಾಪು ಸಮುದ್ರ ತೀರದಿಂದ ಸಮುದ್ರದ ಮಧ್ಯದಲ್ಲಿ ಈ ಬಡಪಾಯಿ ಕಾರ್ಮಿಕರು ಸಿಕ್ಕಿಬಿದ್ದಿರುತ್ತಾರೆ, ಸಮುದ್ರ...

ಹೋಪ್ ಇಂಡಿಯಾ ಫೌಂಡೇಶನ್​ ವತಿಯಿಂದ ​ಕೊರೋನಾ ಮುಕ್ತ ಉಡುಪಿ ನಿರ್ಮಾಣ​ ಪಣ ​  ​​

ಉಡುಪಿ ಬೋರ್ಡ್ ಹೈಸ್ಕೂ​ನಲ್ಲಿ  ಆಶ್ರಯ ಪಡೆದಿರುವ ಭಿಕ್ಷುಕರು, ನಿರ್ಗತಿಕರು ಹಾಗೂ ಹೊರ ಜಿಲ್ಲೆಗಳಿಂದ ಬಂದಿರುವ ವಲಸೆ ಕಾರ್ಮಿಕರಲ್ಲಿ ಹೆಚ್ಚಿನವರಿಗೆ ಕೊರೋನಾ ಸೋಂಕು ತಗಲಿರುವ ಬಗ್ಗೆ ಸಂಶಯವಿದ್ದು ಅವರಿಂದ ಉಳಿದ ಸಾರ್ವಜನಿಕರಿಗೆ ಹರಡುವುದನ್ನು ತಪ್ಪಿಸಿ ಕೊರೋನಾ...

ಉಡುಪಿ ಜಿಲ್ಲೆ: 1197 ಗುಣಮುಖ ​~  5 ಸಾವು

ಉಡುಪಿ ಜಿಲ್ಲೆಯಲ್ಲಿ 745 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು- 316,  ಕಾರ್ಕಳ-113 ​,  ಕುಂದಾಪುರ- 307, ಮತ್ತು ಹೊರ ಜಿಲ್ಲೆಯ 9 ಮಂದಿ ಸೋಂಕಿಗೆ ಒಳಗಾಗಿದ್ದಾರೆ.​ 1197 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 39668 ಮಂದಿ...
error: Content is protected !!