ಡಾ. ಎಂ. ಡಿ. ಹೆಗ್ಡೆ ನಿಧನ

ಉಡುಪಿ ದೊಡ್ಡಣಗುಡ್ಡೆ ನಿವಾಸಿಯಾದ ಡಾ. ಎಂ. ಡಿ. ಹೆಗ್ಡೆ 25-8-2022 ರಂದು ದೊಡ್ಡಣಗುಡ್ಡೆಯಲ್ಲಿರುವ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 93 ವರ್ಷ ವಯಸ್ಸಾಗಿತ್ತು.

ಶ್ರೀಯುತರು ಆರೋಗ್ಯ ಇಲಾಖೆಯ ಪ್ರಾಥಮಿಕ ಆರೋಗ್ಯ ಕೇಂದ್ರ, ಪಂಜ, ಬೆಳ್ಳಾರೆ, ಸುಬ್ರಹ್ಮಣ್ಯ ಹಾಗೂ ಮಲ್ಪೆಯಲ್ಲಿ ಸುಮಾರು 30 ವರ್ಷಗಳಿಗೂ ಹೆಚ್ಚುಕಾಲ ಆರೋಗ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಉಡುಪಿ ದೊಡ್ಡಣಗುಡ್ಡೆಯಲ್ಲಿರುವ ಕರ್ನಾಟಕ ಗೃಹಮಂಡಳಿ ನಿವಾಸಿಗರ ಸಂಘದಲ್ಲಿ ಅಧ್ಯಕ್ಷರಾಗಿ ಅನೇಕ ವರ್ಷಗಳ ಕಾಲ ಸೇವೆ ಸಲ್ಲಿಸಿ ಜನಾನುರಾಗಿ ವೈದ್ಯರಾಗಿದ್ದರು.

ಶ್ರೀಯುತರು ಪತ್ನಿ, ನಾಲ್ವರು ಪುತ್ರರು, ಓರ್ವ ಪುತ್ರಿ ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ.

ಡಾ. ಎಂ. ಡಿ. ಹೆಗ್ಡೆಯವರ ನಿಧನಕ್ಕೆ ಕರ್ನಾಟಕ ಗ್ರಹ ಮಂಡಳಿ ನಿವಾಸಿಗರ ಸಂಘದ ಅಧ್ಯಕ್ಷ ಕುತ್ಪಾಡಿ ವಿಠಲ ಗಾಣಿಗ, ಉಪಾಧ್ಯಕ್ಷ ಸುಬ್ರಹ್ಮಣ್ಯ ಶೇರೆಗಾರ್, ಕಾರ್ಯದರ್ಶಿ ಎನ್. ರಾಮ ಭಟ್ ಮೊದಲಾದವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

 
 
 
 
 
 
 
 
 
 
 

Leave a Reply