Janardhan Kodavoor/ Team KaravaliXpress
33 C
Udupi
Friday, February 26, 2021

ಉಡುಪಿ: ಮದ್ಯ ವ್ಯಸನಿಗಳ ಮಕ್ಕಳ ಜಾಗೃತಿ ಸಪ್ತಾಹದ ಅಂಗವಾಗಿ ವ್ಯಂಗ್ಯಚಿತ್ರ ಪ್ರದರ್ಶನ

ಉಡುಪಿ : ಉಡುಪಿ ದೊಡ್ಡಣಗುಡ್ಡೆಯ ಡಾ.ಎ.ವಿ. ಬಾಳಿಗಾ ಮೆಮೋರಿಯಲ್ ಆಸ್ಪತ್ರೆ, ರೋಟರಿ ಕ್ಲಬ್ ಮಣಿಪಾಲ ಮತ್ತು ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಕರಾವಳಿ ಇದರ ಆಶ್ರಯದಲ್ಲಿ ಶುಕ್ರವಾರ ದಂದು ಆಸ್ಪತ್ರೆಯ ಕಮಲ್ ಎ. ಬಾಳಿಗಾ ಸಭಾಂಗಣದಲ್ಲಿ ಮದ್ಯವ್ಯಸನಿಗಳ ಮಕ್ಕಳ ಜಾಗೃತಿ ಸಪ್ತಾಹ ಪ್ರಯುಕ್ತ ವ್ಯಂಗ್ಯಚಿತ್ರ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು.

ಕ್ರಾಫ್ಟ್ಸ್ ಮಂತ್ರ ಇದರ ಸಂಸ್ಥಾಪಕಿ ರೇಣು ಜಯರಾಂ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಆಸ್ಪತ್ರೆಯ ನಿರ್ದೇಶಕ, ಮನೋವೈದ್ಯ ಡಾ. ಪಿ ವಿ ಭಂಡಾರಿ ಮಾತನಾಡಿ ಪೋಷಕರಿಗೆ ಕುಡಿತದ ಚಟ ಇದ್ದರೆ ಮಕ್ಕಳು ಕೂಡ ಆ ಚಟವನ್ನು ಬೆಳೆಸಿಕೊಳ್ಳುತ್ತಾರೆ. ಕೆಲವು ಬಾರಿ ಅವರ ಮಕ್ಕಳು ಎಲ್ಲ ಚಟಗಳಿಂದ ದೂರವಿರುವ ಸಾಧ್ಯತೆಯೂ ಇರುತ್ತದೆ. ಮುಖ್ಯವಾಗಿ ಮಕ್ಕಳು ಒಂಟಿತನ ಹಾಗೂ ಏಕಾಂತ ಜೀವನದಿಂದಾಗಿ ಕೀಳರಿಮೆಯಿಂದ ಬಳಲುವ ಸನ್ನಿವೇಶಗಳು ಎದುರಾಗಲಿವೆ ಎಂದು ಹೇಳಿದರು.

ಮದ್ಯವ್ಯಸನಿಗಳ ಮಕ್ಕಳ ಜಾಗೃತಿ ಸಪ್ತಾಹ ಪ್ರಯುಕ್ತ ಮಲ್ಪೆ ಬೀಚಿನಲ್ಲಿ ಮರಳು ಶಿಲ್ಪ ರಚನೆ ಮೂಲಕ ಜಾಗೃತಿ ಮೂಡಿಸುವ ಕೆಲಸವನ್ನು ಕೆಲ ದಿನಗಳ ಹಿಂದೆ ಹಮ್ಮಿಕೊಳ್ಳಲಾಗಿತ್ತು.ಇಂದು ವ್ಯಂಗ್ಯ ಚಿತ್ರ ಪ್ರದರ್ಶನದ ಮೂಲಕ ಪೋಷಕರು ಮತ್ತು ಮಕ್ಕಳಲ್ಲಿ ಜಾಗೃತಿ ಮೂಡಿಸುವ ಕೆಲಸ ನಡೆಯಿತು.

ಐವತ್ತಕ್ಕೂ ಹೆಚ್ಚು ವ್ಯಂಗ್ಯಚಿತ್ರಕಾರರು ರಚಿಸಿದ ವ್ಯಂಗ್ಯ ಚಿತ್ರಗಳು ಪ್ರದರ್ಶನಗೊಂಡವು. ಆಸ್ಪತ್ರೆಯ ಮನೋವೈದ್ಯ ಡಾ.ವಿರೂಪಾಕ್ಷ ದೇವರಮನೆ, ಹಿರಿಯ ವ್ಯಂಗ್ಯಚಿತ್ರಕಾರ ಜೇಮ್ಸ್ ವಾಝ್, ಆಸ್ಪತ್ರೆಯ ಆಡಳಿತಾಧಿಕಾರಿ ಸೌಜನ್ಯ ಶೆಟ್ಟಿ , ನಾಗರಾಜ್ ಟಿ.ಪಿ, ದಿವ್ಯಶ್ರೀ ಮತ್ತಿತರರು ಉಪಸ್ಥಿತರಿದ್ದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

ಕಿದಿಯೂರು ಹೋಟೆಲ್ ನಲ್ಲಿರುವ  ಶ್ರೀ ನಾಗದೇವರ ಸನ್ನಿಧಾನದಲ್ಲಿ 34 ನೇ ವಾರ್ಷಿಕ ಮಹಾಪೂಜೆ 

ಉಡುಪಿ:  ಕಿದಿಯೂರು ಹೋಟೆಲ್ ನಲ್ಲಿರುವ  ಶ್ರೀ ನಾಗದೇವರ ಸನ್ನಿಧಾನದಲ್ಲಿ 34 ನೇ ವಾರ್ಷಿಕ ಮಹಾಪೂಜೆ  ಶುಕ್ರವಾರ ವಿದ್ವಾನ್ ಕಬಿಯಾಡಿ​ ​ಜಯರಾಮ ​ಆಚಾರ್ಯ  ಮಾರ್ಗ ದರ್ಶನದಲ್ಲಿ  ಆಶ್ಲೇಷಾಬಲಿ , ನವಕ ಕಲಶ, ಪ್ರಧಾನ ಹೋಮ...

ಭಾರತೀಯ ಚಾರ್ಟರ್ಡ್ ಅಕೌಟೆಂಟ್ಸ್ ಸಂಸ್ಥೆಯ ದಕ್ಷಿಣ ಭಾರತ ಪ್ರಾಂತೀಯ ಮಂಡಳಿ ಉಡುಪಿ ಶಾಖೆಗೆ ಸಿಎ. ಕವಿತ ಎಮ್ ಪೈ ಟಿ ನೂತನ  ಅಧ್ಯಕ್ಷೆ 

ಉಡುಪಿ: ಭಾರತೀಯ ಚಾರ್ಟರ್ಡ್ ಅಕೌಟೆಂಟ್ಸ್ ಸಂಸ್ಥೆಯ ದಕ್ಷಿಣ ಭಾರತ ಪ್ರಾಂತೀಯ ಮಂಡಳಿ ಉಡುಪಿ ಶಾಖೆಗೆ ಸಿಎ. ಕವಿತ ಎಮ್ ಪೈ ಟಿ ಅವರು 2021-22 ನೇ ಸಾಲಿಗೆ 20ನೇ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಈ...

ಶ್ರೀ ದುರ್ಗಾ ದೇವಸ್ಥಾನ ಕುಂಜೂರುವಿನಲ್ಲಿ ಮಾರ್ಚ್,1ರಂದು ತ್ರಿಕಾಲ ಪೂಜೆ 

 ದುರ್ಗಾ ಸೇವಾ ಸಮಿತಿ ಕುಂಜೂರು ಇವರು ಆಯೋಜಿಸುವ  ಶ್ರೀ ದುರ್ಗಾ ದೇವಸ್ಥಾನ ಕುಂಜೂರು ಇಲ್ಲಿ ಮಾರ್ಚ್,1 ರಂದು  ತ್ರಿಕಾಲ ಪೂಜೆ ಅನ್ನಸಂತರ್ಪಣೆ ಮುಂತಾದ ಧಾರ್ಮಿಕ ವಿಧಿವಿಧಾನಗಳು ನಡೆಯಲಿವೆ. ದಿನದ ತ್ರಿಸಂಧ್ಯಾ ಕಾಲಗಳಲ್ಲಿ  ಶ್ರೀ ದುರ್ಗಾ ಮಾತೆಗೆ ವಿಸ್ತೃತ...

ಹೆಸರಾಂತ ಆಯುರ್ವೇದ ವೈದ್ಯ ಜಿ. ಶ್ರೀನಿವಾಸ ಆಚಾರ್ಯ ನಿಧನ

ಉಡುಪಿ: ಇಲ್ಲಿನ ಕುತ್ಪಾಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಪ್ರಾಚಾರ್ಯ ಡಾ. ಜಿ. ಶ್ರೀನಿವಾಸ ಆಚಾರ್ಯ ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ...
error: Content is protected !!