ಗ್ಯಾಸ್ಟಿಕ್ ಸಮಸ್ಯೆಗೆ ಉಚಿತ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ

ಮಣಿಪಾಲದ ಶಿವಳ್ಳಿ ಇಂಡಸ್ಟ್ರಿಯಲ್  ಏರಿಯಾದಲ್ಲಿರುವ ಮುನಿಯಾಲು ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಇದೇ ದಿನಾಂಕ 01.4.24 ರಿಂದ 07.04.24 ರವರೆಗೆ ಪೂರ್ವಾಹ್ನ 9.00 ರಿಂದ ಅಪರಾಹ್ನ 4.00ರವರೆಗೆ ಗ್ಯಾಸ್ಟಿಕ್ ಸಮಸ್ಯೆಗೆ ಉಚಿತ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರವನ್ನು  ಹಮ್ಮಿಕೊಳ್ಳಲಾಗಿದೆ.
ದಿನಾಂಕ 01.04.2024ರಂದು ಮುನಿಯಾಲ್ ಆಯುರ್ವೇದ ಸಂಸ್ಥೆಯ ಪ್ರಾಂಶುಪಾಲರಾದ ಡಾ. ಸತ್ಯನಾರಾಯಣ ಬಿ, ಪಿ.ಜಿ. ಡೀನ್ ಮತ್ತು ದ್ರವ್ಯಗುಣ ವಿಭಾಗದ ಮುಖ್ಯಸ್ಥರಾದ ಡಾ.ಚಂದ್ರಕಾ೦ತ್ ಭಟ್, ರೋಗನಿಧಾನ ವಿಭಾಗದ ಮುಖ್ಯಸ್ಥರಾದ ಡಾ.ರವಿಶಂಕರ ಶೆಣೈ, ಆಸ್ಪತ್ರೆಯ ಮೇಲ್ವಿಚಾರಕ ಡಾ.ಪ್ರಮೋದ್ ಶೇಟ್, ಕಾಯಚಿಕಿತ್ಸಾ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಮಾಧವಿ ಇವರು ದೀಪೋಜ್ವಲನ ಮಾಡುವ ಮೂಲಕ ಸಾಂಕೇತಿಕವಾಗಿ ಉದ್ಘಾಟಿಸಿದರು.
ಸಂಸ್ಥೆಯ ಇತರ ವೈದ್ಯರು, ಸ್ನಾತಕೋತ್ತರ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.   ಅಜೀರ್ಣ, ಹುಳಿ ತೇಗು, ಹೊಟ್ಟೆನೋವು, ಹೊಟ್ಟೆ ಉಬ್ಬರಿಸುವಿಕೆ, ವಾಕರಿಕೆ, ಎದೆಯುರಿ, ಹಸಿವಿಲ್ಲದಿರುವಿಕೆ ಮುಂತಾದ ಲಕ್ಷಣಗಳಿರುವ ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆದು ಕೊಳ್ಳಬೇಕೆಂದು ಸಂಸ್ಥೆಯ ಪತ್ರಿಕಾ ಪ್ರಕಟಣೆ ತಿಳಿಸಿದೆ.
 
 
 
 
 
 
 
 
 
 
 

Leave a Reply