ಕರೋನಾ ಎರಡನೇ ಅಲೆ – ರಾಜ್ಯದಲ್ಲಿ ನಾಳೆಯಿಂದ ಹೊಸ ನಿಯಮಗಳು ಜಾರಿಗೆ

ಬೆಂಗಳೂರು: ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಾಲೆ, ಕಾಲೇಜುಗಳನ್ನು ಬಂದ್ ಮಾಡಿ ಆದೇಶಿಸಲಾಗಿದ್ದು, ರಾಜ್ಯ ಸರಕಾರ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ.  

ಸೋಂಕಿನ ನಿಯಂತ್ರಣಕ್ಕೆ ವೀಕೆಂಡ್ ಕರ್ಪ್ಯೂ ಜಾರಿ ಮಾಡಲಾಗಿದ್ದು, ರಾತ್ರಿ ಕರ್ಪ್ಯೂ ಅವಧಿಯನ್ನು ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ವಿಸ್ತರಿಸಿ ಅನೇಕ ಹೊಸ ನಿಯಮಗಳು ನಾಳೆಯಿಂದ ಜಾರಿಯಾಗಲಿವೆ.

ರಾಜ್ಯ ಸರಕಾರ ಮುಖ್ಯ ಕಾರ್ಯದರ್ಶಿ ರವಿ ಕುಮಾರ್ ಅವರು ಸುದ್ದಿಗೋಷ್ಟಿಯಲ್ಲಿ ಮಾರ್ಗಸೂಚಿಯನ್ನು ಪ್ರಕಟಿಸಿ. ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ನೈಟ್ ಕರ್ಪ್ಯೂ ಅವಧಿಯಲ್ಲಿ ವಿಸ್ತರಣೆ ಮಾಡಲಾಗಿದ್ದು, ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯ ವರಗೆ ನೈಟ್ ಕರ್ಪ್ಯೂ ಜಾರಿ ಮಾಡಲಾಗಿದೆ. ಅಲ್ಲದೇ ವೀಕೆಂಡ್ ಕರ್ಪ್ಯೂ ಜಾರಿ ಮಾಡಲಾಗಿದ್ದು, ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ಕರ್ಪ್ಯೂ ಜಾರಿಯಲ್ಲಿರಲಿದೆ ಎಂದರು.

ಶೈಕ್ಷಣಿಕ ಚಟುವಟಿಕೆಗಳಿಗೆ ಸಂಪೂರ್ಣವಾಗಿ ಬ್ರೇಕ್ ಹಾಕಲಾಗಿದ್ದು, ಪಾರ್ಕ್, ಜಿಮ್ ಗಳನ್ನು ಸಂಪೂರ್ಣವಾಗಿ ಬಂದ್ ಮಾಡಿ ಆದೇಶಿಸಲಾಗಿದೆ.

 
 
 
 
 
 
 
 
 
 
 

Leave a Reply