Janardhan Kodavoor/ Team KaravaliXpress
26.6 C
Udupi
Tuesday, January 31, 2023
Sathyanatha Stores Brahmavara

ಚೀನಾದ ಕೋವಿಡ್ ಹೊಸ ತಳಿ ಭಾರತದಲ್ಲಿ ಪತ್ತೆ – ರಾಜ್ಯಗಳಲ್ಲಿ ಹೈ ಅಲರ್ಟ್

ನವದೆಹಲಿ: ಚೀನಾದ ಆತಂಕಕ್ಕೆ ಕಾರಣವಾಗಿರುವ ಕೊರೊನಾ ವೈರಸ್ ಭಾರತದಲ್ಲಿ ಒಟ್ಟು ನಾಲ್ಕು ಪ್ರಕರಣಗಳು ವರದಿಯಾಗಿದ್ದು, ಗುಜರಾತ್ ಹಾಗೂ ಒಡಿಶಾ ರಾಜ್ಯಗಳಲ್ಲಿ ತಲಾ ಎರಡು ಪ್ರಕರಣಗಳು ವರದಿಯಾಗಿವೆ. ಬಿಎಫ್.7 ಸೋಂಕಿನ ಮೊದಲ ಪ್ರಕರಣ ಅಕ್ಟೋಬರ್‌ನಲ್ಲಿ ಗುಜರಾತ್‌ನಲ್ಲಿ ಪತ್ತೆ ಯಾಯಿತು. ಗುಜರಾತ್ ಬಯೋಟೆಕ್ನಾಲಜಿ ಸಂಶೋಧನಾ ಕೇಂದ್ರವು ಈ ಪ್ರಕರಣವನ್ನು ಪತ್ತೆ ಮಾಡಿತು.  2ನೇ ಪ್ರಕರಣವೂ ಗುಜರಾತ್‌ನಲ್ಲಿ ಪತ್ತೆಯಾಗಿದ್ದರೆ, ಉಳಿದೆರಡು ಪ್ರಕರಣಗಳು ಒಡಿಶಾದಲ್ಲಿ ವರದಿಯಾಗಿವೆ.

ಚೀನಾದಲ್ಲಿ ಸದ್ಯ ಅಧಿಕ ಸಂಖ್ಯೆಯಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿರುವುದಕ್ಕೆ ವೈರಸ್‌ನ ಈ ಬಿಎಫ್.7 ಉಪತಳಿಯೇ ಕಾರಣ ಎಂದು ಮೂಲಗಳು ತಿಳಿಸಿವೆ. ಯುಎಸ್, ಯುಕೆ, ಯುರೋಪಿಯನ್ ದೇಶಗಳಾದ ಬೆಲ್ಜಿಯಂ, ಜರ್ಮನಿ, ಫ್ರಾನ್ಸ್ ಹಾಗೂ ಡೆನ್ಮಾರ್ಕ್ ದೇಶಗಳಲ್ಲೂ ಬಿಫ್.7 ಉಪತಳಿ ಪತ್ತೆಯಾಗಿದ್ದು, ಆತಂಕ ಹೆಚ್ಚಿಸಿದೆ.

ಚೀನಾದಲ್ಲಿಓಮಿಕ್ರಾನ್‌ನ ಉಪತಳಿ ಬಿಎಫ್.7 ಸೋಂಕು ವೇಗವಾಗಿ ಹರಡುತ್ತಿದೆ. ಚೀನಾ ಪ್ರಜೆಗಳ ದೇಹದಲ್ಲಿ ಈ ಮೊದಲು ಕಾಣಿಸಿಕೊಂಡ ಕೊರೊನಾ ಸೋಂಕಿನಿಂದಾಗಿ ವೃದ್ಧಿಸಿರುವ ರೋಗನಿರೋಧಕ ಶಕ್ತಿ ಕಡಿಮೆ ಮಟ್ಟದಲ್ಲಿ ಇರಬಹುದು. ಇಲ್ಲವೇ, ಅವರಿಗೆ ನೀಡಿರುವ ಲಸಿಕೆಯು ಪರಿಣಾಮಕಾರಿ ಯಾಗಿರದೇ ಇರುವುದು ಇದಕ್ಕೆ ಕಾರಣ ಎನ್ನಲಾಗುತ್ತಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಭಾರತದಲ್ಲಿ ಈಗಾಗಲೇ ಎಲ್ಲ ರಾಜ್ಯಗಳೂ ಅಲರ್ಟ್ ಆಗಿದ್ದು, ಸಾರ್ವಜನಿಕರು ಜಾಗೃತವಾಗಿರುವಂತೆ ಸೂಚಿಸಿವೆ. ಜನರು ಗುಂಪಿನಲ್ಲಿದ್ದಾಗ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚಿಸಲಾಗಿದೆ. ಅಲ್ಲದೇ ಉಪತಳಿಗಳನ್ನು ಶೀಘ್ರವಾಗಿ ಪತ್ತೆಹಚ್ಚಲು ಜಿನೋಮ್ ಸಿಕ್ವೆನ್ಸಿಂಗ್ ಲ್ಯಾಬ್‌ಗೆ ಮಾದರಿ ಕಳುಹಿಸುವಂತೆ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಹೇಳಿದೆ.

ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 129 ಪ್ರಕರಣಗಳು ವರದಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 3,408ಕ್ಕೆ ಏರಿಕೆಯಾಗಿದೆ. 24 ಗಂಟೆಯಲ್ಲಿ ಒಂದು ಸಾವಿನ ಪ್ರಕರಣ ದಾಖಲಾಗಿದೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!