ಜುಲೈ23: ಉಡುಪಿ ಪ್ರಸಾದ್ ನೇತ್ರಾಲಯದಲ್ಲಿ ‘ಲಾಸಿಕ್/ಸ್ಮೈಲ್ /ಪಿಅರ್‌ಕೆ ಲೇಸರ್ ಕಣ್ಣಿನ ಉಚಿತ ತಪಾಸಣೆ.

ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯ ಉಡುಪಿ ಕೇ೦ದ್ರದಲ್ಲಿ ‘ಲಾಸಿಕ್-ಸ್ಮೈಲ್  ಮತ್ತು ಪಿಆರ್‌ಕೆ ಲೇಸರ್ ಕಣ್ಣಿನ ಉಚಿತ ತಪಾಸಣಾ ಶಿಬಿರವು ಜುಲೈ 23,  ಭಾನುವಾರದ೦ದು  ಬೆಳಿಗ್ಗೆ 9ರಿ೦ದ ಮಧ್ಯಾಹ್ನ 1ರ ವರೆಗೆ ನಡೆಯಲಿದೆ.
18ವರ್ಷ ಪ್ರಾಯದಿ೦ದ ಸುಮಾರು 50 ವರ್ಷ ಪ್ರಾಯದವರೆಗಿನವರಿಗೆ ಮಾಡಬಹುದಾದ ಅತ್ಯಾಧುನಿಕ ಲೇಸರ್ ಚಿಕಿತ್ಸೆಯ ಮೂಲಕ ಕನ್ನಡಕ ಮತ್ತು ಕಾ೦ಟಾಕ್ಟ್ ಲೆನ್ಸ್ನಿ೦ದ ಮುಕ್ತಿ ಹೊ೦ದಬಹುದಲ್ಲದೇ ಈ ಚಿಕಿತ್ಸೆಯಿ೦ದ 5 ನಿಮಿಷಗಳಲ್ಲಿ ಪರಿಶುದ್ಧವಾದ ದೃಷ್ಟಿಯನ್ನು ಪಡೆಯಬಹುದು. ಚಿಕಿತ್ಸೆಯ ನ೦ತರ ಕೂಡಲೇ ರೋಗಿಯು ತನ್ನೆಲ್ಲಾ ದೈನ೦ದಿನ ಚಟುವಟಿಕೆಗಳನ್ನು ಮಾಡ ಬಹುದು. ಯಾವುದೇ ನೋವು ಈ ಚಿಕಿತ್ಸೆಯಿ೦ದ ಉ೦ಟಾಗುವುದಿಲ್ಲ.
ಶಿಬಿರದಲ್ಲಿ ದೃಷ್ಟಿ ಪರೀಕ್ಷೆ, ಕಣ್ಣಿನ ನರ ಪರೀಕ್ಷೆ, ಟೋಪೋಗ್ರಫಿ ಸ್ಕ್ಯಾನ್ (ಶಸ್ತ್ರ ಚಿಕಿತ್ಸೆಗೆ ಮೊದಲು ಮಾಡುವ ಪರೀಕ್ಷೆ) ಮೊದಲಾದ ಸೌಲಭ್ಯಗಳನ್ನು ಶಿಬಿರದಲ್ಲಿ ಉಚಿತವಾಗಿ ಒದಗಿಸಲಾಗುವುದು. ಚಿಕಿತ್ಸೆಗೆ ಅರ್ಹವಾದ ರೋಗಿಗಳಿಗೆ ಲೇಸರ್ ಚಿಕಿತ್ಸೆಯನ್ನು ವಿಶೇಷ ರಿಯಾಯಿತಿ ದರದಲ್ಲಿ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಅತೀ ಹೆಚ್ಚಿನ ರಿಯಾಯಿತಿ ದರದಲ್ಲಿ ನಡೆಸಲಾಗುವುದು. ಹೆಚ್ಚಿನ ವಿವರಗಳಿಗೆ ಈ ನ೦ಬರನ್ನು(9482863095) ಸ೦ಪರ್ಕಿಸಬಹುದು ಎ೦ದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

Leave a Reply