ಡೆಂಗ್ಯೂ, ಮಲೇರಿಯಾದಂತಹ ಸಾಂಕ್ರಾಮಿಕ ರೋಗ ಹರಡದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿ~ ಡಾ.ಪ್ರಶಾಂತ್ ಭಟ್

ಉಡುಪಿ: ಡೆಂಗ್ಯೂ, ಮಲೇರಿಯಾದಂತಹ ಸಾಂಕ್ರಾಮಿಕ ರೋಗ ಹರಡದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಈ ಜವಾಬ್ದಾರಿ ಮರೆಯುವ ನಾಗರಿಕರ ವಿರುದ್ಧ ಕಾನೂನು ಕ್ರಮ ಜರುಗಿಸುವ ಸಿವಿಲ್ ಬೈಲಾವನ್ನು ಉಡುಪಿ ನಗರಸಭೆಗೆ ಕರಡು ಪ್ರತಿ ತಯಾರಿಸಿ ಸಲ್ಲಿಸಲಾಗಿದೆ. 
ಇದನ್ನು ಜಾರಿಗೆ ತರುವ ಬಗ್ಗೆ ರಾಜ್ಯ ಸರಕಾರದ ಮಟ್ಟದಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಪ್ರಶಾಂತ್ ಭಟ್ ತಿಳಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಜನವರಿಯಿಂದ ಜೂನ್ 25ರವರೆಗೆ ಒಟ್ಟು 164 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. 
ಇದರಲ್ಲಿ ಉಡುಪಿ- 102, ಕುಂದಾಪುರ- 35, ಕಾರ್ಕಳ- 25 ಪ್ರಕರಣಗಳು ಕಂಡುಬಂದಿವೆ. ಅದೇ ರೀತಿ ಒಟ್ಟು 30 ಮಲೇರಿಯಾ ಪ್ರಕರಣಗಳು ಪತ್ತೆಯಾಗಿವೆ. ಇದರಲ್ಲಿ 29 ವಲಸೆ ಕಾರ್ಮಿಕರು ಹಾಗೂ ಒಬ್ಬರು ಸ್ಥಳೀಯರು ಸೇರಿದ್ದಾರೆ ಎಂದುರು. 
 
 
 
 
 
 
 
 

Leave a Reply