30 ಕೋಟಿಯನ್ನು ಸಾವಿರ ಬೆಡ್​​ಗಳ ಕೊರೊನಾ ಆಸ್ಪತ್ರೆ ನಿರ್ಮಾಣಕ್ಕೆ ಮೀಸಲಿಟ್ಟ ಎಸ್‌ಬಿಐ

ನವದೆಹಲಿ: ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದ್ದು ಹಿನ್ನೆಲೆ ಆಸ್ಪತ್ರೆಯಲ್ಲಿ ಬೆಡ್‌ಗಾಗಿ ಅನೇಕರು ಪರದಾಡುವ ದುಸ್ಥಿತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಐಸಿಯು ಸೌಲಭ್ಯದೊಂದಿಗೆ ತಾತ್ಕಾಲಿಕ ಕೋವಿಡ್ ಆಸ್ಪತ್ರೆಗಳನ್ನು ನಿರ್ಮಿಸಲು ಮುಂದಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಎಸ್​ಬಿಐ ಅಧ್ಯಕ್ಷ ದಿನೇಶ್ ಕುಮಾರ್, “ಕೊರೊನಾ ಹೆಚ್ಚಿರುವ ರಾಜ್ಯಗಳಲ್ಲಿ 50 ಐಸಿಯು ಸೌಲಭ್ಯಗಳೊಂದಿಗೆ 1,000 ಹಾಸಿಗೆಗಳ ವ್ಯವಸ್ಥೆ ಕಲ್ಪಿಸಲು ಎಸ್​ಬಿಐ ನಿರ್ಧಾರ ಮಾಡಿದೆ. ಇದಕ್ಕಾಗಿ 30 ಕೋಟಿ ಮೀಸಲಿಟ್ಟಿದೆ” ಎಂದು ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply