ವಿದ್ಯಾರ್ಥಿಗಳು, ಶಿಕ್ಷಕರು ಕಾಲೇಜು ಆರಂಭಕ್ಕೂ ಮುನ್ನ​ ಮಾಡಬೇಕು ಕೊರೋನಾ ಟೆಸ್ಟ್

ಕೊರೋನಾದ ನಡುವೆಯೆ ನವೆಂಬರ್ 17ರಿಂದ ರಾಜ್ಯಾದ್ಯಂತ ಕಾಲೇಜು ತೆರೆಯಲು ರಾಜ್ಯ ಸರಕಾರ ಅನುಮತಿ ನೀಡಿದೆ. ಈ ಹಿನ್ನೆಲೆ ವಿದ್ಯಾರ್ಥಿಗಳು, ಶಿಕ್ಷಕರು ಕೋವಿಡ್ ನೆಗೆಟಿವ್ ರಿಪೋರ್ಟ್ ಸಲ್ಲಿಕೆ ಮಾಡಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ.

 ಶಿಕ್ಷಕರು, ವಿದ್ಯಾರ್ಥಿಗಳು, ಕಾಲೇಜು ಹಾಗೂ ಹಾಸ್ಟೆಲ್​​ಗಳ ಬೋಧಕೇತರ ಸಿಬ್ಬಂದಿ ಕಡ್ಡಾಯವಾಗಿ ಕಾಲೇಜು ಆರಂಭದ 72 ಗಂಟೆಗೆ ಮೊದಲು ಕೋವಿಡ್ ಆರ್​​ಟಿಪಿಸಿಆರ್ ಟೆಸ್ಟ್ ಮಾಡಿಸಬೇಕು. ವಿದ್ಯಾರ್ಥಿಗಳು, ಶಿಕ್ಷಕರು ಕೋವಿಡ್ ನೆಗೆಟಿವ್ ರಿಪೋರ್ಟ್ ಸಲ್ಲಿಕೆ ಮಾಡಬೇಕೆಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಇನ್ನು ಕೋವಿಡ್ ಟೆಸ್ಟ್​​ಗೆ ಅಗತ್ಯವಿರುವ ಸಿದ್ಧತೆಗಳು, ಗಂಟಲು ದ್ರವದ ಸ್ಯಾಂಪಲ್ ಸಂಗ್ರಹ ಹಾಗೂ ಪರೀಕ್ಷೆಗೆ ಅಗತ್ಯವಿರುವ ಸಿಬ್ಬಂದಿಯನ್ನು ಕೂಡಲೇ ನೇಮಿಸಿ ತ್ವರಿತವಾಗಿ ಟೆಸ್ಟಿಂಗ್ ನಡೆಯಬೇಕು ಎಂದು ಇಲಾಖೆ ತಿಳಿಸಿ​​ದೆ.

 
 
 
 
 
 
 
 
 

Leave a Reply